HESCOM
ಸೆ.15 ರಂದುವಿದ್ಯುತ್ಪೂರೈಕೆಯಲ್ಲಿವ್ಯತ್ಯಯ
ಸಪ್ತಸಾಗರ ವಾರ್ತೆ ವಿಜಯಪುರ,ಸೆ.13 :ನವರಸಪುರ ಶಾಖಾ ವ್ಯಾಪ್ತಿಯಲ್ಲಿ ಹೆಚ್.ಟಿ ವಾಹಕ ಬದಲಾವಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವುದರಿಂದ ಸೇನಾ ನಗರ ಫೀಡರ್‌ನ ಮೇಲೆ ಬರುವ ಟ್ರೇಝರಿ ಕಾಲೋನಿ, ರಾಮದೇವ ನಗರ,ಅಯ್ಯಪ್ಪ ಸ್ವಾಮಿ ದೇವಸ್ಥಾನ,ಇಟಗಿ ಕಾಲೋನಿ, ವೇದಾಂತ ಹಾಸ್ಪಿಟಲ್, ನಿಂಬರಗಿ ಬಡಾವಣೆ, ಕುಲಕರ್ಣಿ ಲೇಔಟ್, ಖುರೇಷಿ ಕಾಲೋನಿ ಹತ್ತಿರದ ಪ್ರದೇಶಗಳಲ್ಲಿ ಸೆ.15ರ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.ಗ್ರಾಹಕರು ಸಹಕರಿಸುವಂತೆ ಹೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಹೆಸ್ಕಾಂ ಗ್ರಾಮೀಣ ಉಪ ವಿಭಾಗವನ್ನು ಸ್ಥಳಾಂತರ ಮಾಡದಿರಲು ಮನವಿ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 12 : ಹೆಸ್ಕಾಂ ಗ್ರಾಮೀಣ ಉಪ ವಿಭಾಗವನ್ನು ಶಿವಗಿರಿಗೆ ಸ್ಥಳಾಂತರ ಮಾಡುವುದನ್ನು ತಡೆಹಿಡಿಯುವಂತೆ ಒತ್ತಾಯಿಸಿ ರೈತ ಭಾರತ ಪಕ್ಷದಿಂದ ಹೆಸ್ಕಾಂ ಅಧೀಕ್ಷಕ ಅಭಿಯಂತರ ಅವರ ಮೂಲಕ ಶುಕ್ರವಾರ ಹುಬ್ಬಳ್ಳಿ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.ಇದೇ ಸಂದರ್ಭದಲ್ಲಿ ನಾಗಠಾಣ ಮತಕ್ಷೇತ್ರದ ಶಾಸಕ ವಿಠ್ಠಲ್ ಕಟಕದೊಂಡ ಅವರಿಗೂ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ಹೊಸ ಕಟ್ಟಡವನ್ನು ಕಟ್ಟಿಸಿರುತ್ತೀರಿ ಅಂತ ಅಲ್ಲಿಗೆ ಗ್ರಾಮೀಣ ಉಪವಿಭಾಗವನ್ನು ಸ್ಥಳಾಂತರ…
ದೋಷರಹಿತ-ಅಪಘಾತ ರಹಿತ ಹೆಸ್ಕಾಂಗೆ ಕ್ರಮ- ಅಧ್ಯಕ್ಷ ಸೈಯ್ಯದ ಅಜೀಮಪೀರ ಎಸ್.ಖಾದ್ರಿ
ಸಪ್ತಸಾಗರ ವಾರ್ತೆ,ವಿಜಯಪುರ, ಜು. 25:ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಇಂಧನ ಸಚಿವರ ಮಾರ್ಗದರ್ಶನದಲ್ಲಿ ಈಗಾಗಲೇ ಇರುವ ಸಂಪನ್ಮೂಲಗಳ ಸದ್ಬಳಕೆ ಮಾಡಿಕೊಂಡು ಇರುವ ಸಣ್ಣ ಪುಟ್ಟ ಸಮಸ್ಯೆಗಳನ್ನು ಪರಿಹರಿಸಿ ದೋಷರಹಿತ, ಅಪಘಾತ ರಹಿತ ಹೆಸ್ಕಾಂವನ್ನಾಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ ಎಂದು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧ್ಯಕ್ಷ, ಮಾಜಿ ಶಾಸಕ ಸೈಯ್ಯದ ಅಜೀಮಪೀರ ಎಸ್.ಖಾದ್ರಿ ಅವರು ಹೇಳಿದರು.ನಗರದ ಬಿಡಿಎ ಕಚೇರಿಯ ಹತ್ತಿರವಿರುವ ಹೆಸ್ಕಾಂ ಅಧೀಕ್ಷಕ ಅಭಿಯಂತರರ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಸ್ಕಾಂ ವ್ಯಾಪ್ತಿಯ 7…


