ಅಧಿಕಾರ ಹಂಚಿಕೆ: ಹೈಕಮಾಂಡ್ ಅಂತಿಮ ನಿರ್ಧಾರ- ಸಚಿವ ಎಂ.ಬಿ ಪಾಟೀಲ
ಸಪ್ತಸಾಗರ ವಾರ್ತೆ ವಿಜಯಪುರ, ಅ. 3:ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುತ್ತದೆ. ಈ ಬಗ್ಗೆ ಮಾತನಾಡಲು ಯಾರಿಗೂ ಅಧಿಕಾರ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ಕುರಿತು ಮಾತನಾಡುವ ಅಧಿಕಾರ ಯಾರಿಗೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೇ ಹೇಳಿದ್ದಾರೆ ಎಂದರು.ಮುಂದಿನ ಎರಡೂವರೆ ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವ ಪಾಟೀಲ್, ಜನರು ಕೇಳಿದಾಗ ಹಾಗೆ…


