
ಗಣೇಶ ಮೂರ್ತಿ ವಿಸರ್ಜನೆ : ಪಾಲಿಕೆಯಿಂದ ವಾರ್ಡಗಳಲ್ಲಿ ಕೃತಕ ವಿಸರ್ಜನಾ ಹೊಂಡಗಳ ನಿರ್ಮಾಣ
ಸಪ್ತಸಾಗರ ವಾರ್ತೆ ವಿಜಯಪುರ, ಆ. 24: ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಆಚರಿಸಲಾಗುವ ಗಣೇಶ ಹಬ್ಬದ ಸಂದರ್ಭದಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗಳಾಗಿ ಮಹಾನಗರ ಪಾಲಿಕೆ ವತಿಯಿಂದ ನಗರದ ವಿವಿಧ ವಾರ್ಡಗಳಲ್ಲಿ ಕೃತಕ ವಿಸರ್ಜನಾ ಹೊಂಡಗಳನ್ನು ಹಾಗೂ ಸಂಚಾರಿ ಗಣೇಶ ವಿಸರ್ಜನಾ ವಾಹನಗಳ ನಿಯೋಜನೆ ಮಾಡಲಾಗಿದ್ದು, ಸಾರ್ವಜನಿಕರು ಕೃತಕ ಹೊಂಡಗಳಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ಮೂಲಕ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಮಾಡಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರು ಮನವಿ ಮಾಡಿಕೊಂಡಿದ್ದಾರೆ.ಗಣೇಶ ಹಬ್ಬದ ಸಂದರ್ಭದಲ್ಲಿ ಪ್ಲಾಸ್ಟರ್ ಆಪ್…