ಅಭಿವೃದ್ಧಿ ಕಾರ್ಯಗಳಿಂದ ಪ್ರೇರಣೆ: ಹೊನವಾಡದ 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ಗೆ
ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 1: ಬಬಲೇಶ್ವರ ಮತಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಜನಪರ ಯೋಜನೆಗಳ ಅನುಷ್ಠಾನದಿಂದ ಪ್ರೇರಿತರಾಗಿ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರ ಸಮ್ಮುಖದಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ಮುಖಂಡ ಸುನೀಲ ಅವರ ನೇತೃತ್ವದಲ್ಲಿ ಗುರಪ್ಪ ರಂಗಪ್ಪಗೋಳ, ಕೂಸಪ್ಪ ನರಲೆ, ವಿಠ್ಠಲ ತುಪನೂರ, ಸಾವಿತ್ರಿ ಡೇಂಬ್ರಿ, ಸುರೇಖಾ ಡೇಂಬ್ರಿ ಸೇರಿದಂತೆ 50ಕ್ಕೂ ಹೆಚ್ಚು…


