ಸೆ.10ರಿಂದ ವಿಜಯಪುರದಲ್ಲಿ ಅಗ್ನಿವೀರ ನೇಮಕಾತಿ ರ‍್ಯಾಲಿ : ಸುಗಮ ಹಾಗೂ ಪಾರದರ್ಶಕ ನಿರ್ವಹಣೆಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ
ಸಪ್ತಸಾಗರ ವಾರ್ತೆ,ವಿಜಯಪುರ, ಆ.12:ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 10ರಿಂದ 23ರವರೆಗೆ ಭಾರತೀಯ ಸೇನೆಯ ಅಗ್ನಿವೀರ ನೇಮಕಾತಿ ರ‍್ಯಾಲಿ ನಡೆಯಲಿದ್ದು, ರ‍್ಯಾಲಿಯನ್ನು ಶಿಸ್ತುಬದ್ಧ, ಸುಗಮ ಹಾಗೂ ಪಾರದರ್ಶಕವಾಗಿ ನಡೆಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಪೂರ್ಣ ಪ್ರಮಾಣದ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳೂರಿನ ಸೇನಾ ನೇಮಕಾತಿ ಕಚೇರಿ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ರ‍್ಯಾಲಿಯು ಪ್ರತಿದಿನ…


