
ಹಾಸ್ಟೆಲ್ ಮೆಂಟರ್ ಗಳ ನೇಮಿಸಿ ಡಿಸಿ ಆದೇಶ
ಸಪ್ತಸಾಗರ ವಾರ್ತೆ,ವಿಜಯಪುರ,ಆ. ೨೪:ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಜಿಲ್ಲೆಯಲ್ಲಿರುವ ಸರ್ಕಾರಿ ವಸತಿ ನಿಲಯಗಳ ನಿರ್ವಹಣೆ, ಮೂಲಸೌಕರ್ಯಗಳ ಸುಧಾರಣೆ ಹಾಗೂ ಇತರೆ ಚಟುವಟಿಕೆಗಳ ಕಾರ್ಯಕ್ರಮಗಳಿಗಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಹಾಸ್ಟೆಲ್ ಮೆಂಟರ್ ಗಳನ್ನಾಗಿ ಜಿಲ್ಲಾಧಿಕಾರಿಗಳು ನೇಮಕ ಮಾಡಿದ್ದಾರೆ.ಜಿಲ್ಲೆಯ ವಿನೂತನ ಅಭಿಯಾನ ಕಾರ್ಯಕ್ರಮಕ್ಕೆ ನೇಮಕವಾದ ಹಾಸ್ಟೆಲ್ ಮೆಂಟರ್ ಈಗಾಗಲೇ ಜಿಲ್ಲೆಯ ವಿವಿಧ ವಸತಿ ನಿಲಯಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಶೈಕ್ಷಣಿಕ, ವೈಯಕ್ತಿಕ ಹಾಗೂ ಉಜ್ವಲ ಭವಿಷ್ಯದ ಬೆಳವಣಿಗೆಗಾಗಿ ಮಾರ್ಗದರ್ಶನ ನೀಡುವ…