ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ: ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಿದ ಡಿಆರ್ಎಂ ಬೇಲಾ ಮೀನಾ
ಸಪ್ತಸಾಗರ ವಾರ್ತೆ , ಹುಬ್ಬಳ್ಳಿ, ಜೂ. 5: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಹುಬ್ಬಳ್ಳಿ ರೈಲ್ವೆ ವಿಭಾಗವು ಶುಕ್ರವಾರ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ ಮತ್ತು ಆವರಣದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀಮತಿ ಬೇಲಾ ಮೀನಾ, ವಿಭಾಗೀಯ ರೈಲ್ವೆ ವ್ಯವಸ್ಥಾಪಕರು (DRM), ನಿಲ್ದಾಣದ ಆವರಣದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ಕೇವಲ ಘೋಷಣೆ ಅಥವಾ ಆಚರಣೆಗೆ ಸೀಮಿತವಾಗದೆ ಪ್ರತಿಯೊಬ್ಬರ ಜೀವನದಲ್ಲಿ…


