ಮಾನವ ಕಳ್ಳಸಾಗಾಣಿಕೆ ತಡೆಗೆ ಜನಜಾಗೃತಿ ಅತ್ಯಗತ್ಯ: ನ್ಯಾಯಾಧೀಶ ಅರವಿಂದ ಹಾಗರಗಿ
ಸಪ್ತಸಾಗರ ವಾರ್ತೆ,ವಿಜಯಪುರ, ಜುಲೈ 31:ಮಾನವ ಕಳ್ಳಸಾಗಾಣಿಕೆ ಎಂಬುದು ಸಮಾಜದ ಭದ್ರತೆ ಹಾಗೂ ಮಾನವ ಹಕ್ಕುಗಳಿಗೆ ಗಂಭೀರ ಸವಾಲಾಗಿದ್ದು, ಕೇವಲ ಒಂದು ದಿನ ಆಚರಿಸುವುದಕ್ಕಿಂತ ಸಾರ್ವಜನಿಕರಲ್ಲಿ ನಿರಂತರ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರವಿಂದ ಎಸ್. ಹಾಗರಗಿ ಹೇಳಿದರು.ನಗರದ ರಾಘವೇಂದ್ರ ಕಾಲೋನಿಯ ರುಡ್‌ಸೆಟ್ ಸಂಸ್ಥೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತವಾಗಿ…


