
ಇಗ್ನೋ: ಜುಲೈ ಆವೃತ್ತಿ ಪ್ರವೇಶಾತಿ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
ಸಪ್ತಸಾಗರ ವಾರ್ತೆ ವಿಜಯಪುರ, ಸೆ.16: ಪದವಿ ಹಾಗೂ ಡಿಪ್ಲೋಮಾ ಕೋರ್ಸ್ ಗಳ ಜುಲೈ 2025 ಆವೃತ್ತಿಯ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 30ರವರೆಗೆ ಅವಧಿ ವಿಸ್ತರಿಸಲಾಗಿದೆ. ಜುಲೈ-2025ರ ಮರು ಪ್ರವೇಶಾತಿಗೆ ಪುನಃ ನೋಂದಣಿ Link://onlinerr.ignou.ac.in ಲಿಂಕ್ ಬಳಸಿಕೊಂಡು 200 ರೂ. ವಿಳಂಬ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ಸಂಖ್ಯೆ: 08352-252006, email: rcbijapur@ignou.ac.in ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.