ದೇಶೀಯ ಎಲ್‌ಪಿಜಿ ಕಾಳಸಂತೆಗೆ ಕಡಿವಾಣ: ಅಕ್ರಮ ಬಳಕೆ ತನಿಖೆಗೆ ಕೇಂದ್ರದ ಸೂಚನೆ; ಪೆಟ್ರೋಲಿಯಂ ಸಚಿವಾಲಯಕ್ಕೆ ದೂರು ರವಾನೆ

ಸಪ್ತಸಾಗರ ವಾರ್ತೆ,ನವದೆಹಲಿ, ಆ.8: ದೇಶೀಯ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಹಾಗೂ ವಾಹನಗಳಿಗೆ ಅಕ್ರಮವಾಗಿ ಬಳಸುತ್ತಿರುವುದು, ಕಾಳಸಂತೆ ನಡೆಸುತ್ತಿರುವುದು ಮತ್ತು ಇದರಿಂದ ಸಾರ್ವಜನಿಕ ಸುರಕ್ಷತೆಗೆ ಅಪಾಯ ಉಂಟಾಗುತ್ತಿರುವ ಆರೋಪಗಳ ಕುರಿತು ಕೇಂದ್ರ ಸರ್ಕಾರ ಗಂಭೀರ ಕ್ರಮಕ್ಕೆ ಮುಂದಾಗಿದೆ.ಈ ಸಂಬಂಧ ಗ್ರಾಹಕ ದಕ್ಷತಾ ಕಲ್ಯಾಣ್ ಫೌಂಡೇಶನ್ ಸಲ್ಲಿಸಿರುವ ದೂರು ಹಾಗೂ ಪುರಾವೆಗಳನ್ನು ಪರಿಶೀಲನೆಗಾಗಿ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯಕ್ಕೆ ರವಾನಿಸಿದೆ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ,…

Read More

ವಿಜಯಪುರದಲ್ಲಿ ಅಕ್ರಮ ಎಲ್‌ಪಿಜಿ ಗ್ಯಾಸ್ ಪತ್ತೆ: 23 ಸಿಲಿಂಡರ್‌ಗಳ ವಶ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 24:ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿಯಾಗಿ ದಾಳಿ ನಡೆಸಿ, 10 ವಾಣಿಜ್ಯ ಎಲ್ ಪಿಜಿ ಹಾಗೂ 13 ಗೃಹ ಬಳಕೆ ಸಿಲಿಂಡರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.ನಗರದ ರಹಿಂನಗರ ಪ್ರದೇಶದಲ್ಲಿರುವ ರಾಜೇಶ್ವರಿ ಮಲ್ಲಪ್ಪ ಬರಟಗಿ ಅವರ ಖಾಲಿ ಜಾಗೆಯಲ್ಲಿನ ಶೆಡ್‌ನಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳಿಂದ ವಾಣಿಜ್ಯ ಸಿಲಿಂಡರ್‌ಗಳಿಗೆ ಅಕ್ರಮವಾಗಿ ಗ್ಯಾಸ್ ತುಂಬಿಸಿ ಹೋಟೆಲ್‌ಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ದಾಳಿಯ ವೇಳೆ 10…

Read More

ಅಕ್ರಮ ವಾಣಿಜ್ಯ ಚಟುವಟಿಕೆ ನಡೆಸಿದರೆ‌ ಪಾಲಿಕೆಯಿಂದ‌ ಕಠಿಣ ಕ್ರಮದ ಎಚ್ಚರಿಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 15:ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆ ನಡೆಸುವ ಮೂಲಕ ಯಾವುದಾದರೂ ಅನಾಹುತ ಸಂಭವಿಸಿದಲ್ಲಿ ಅಂತಹರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ತಿಳಿಸಿದ್ದಾರೆ.ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಜಾಗೆಗಳು, ಕಟ್ಟಡಗಳ ನೆಲ ಮಹಡಿ, ವಾಹನ ನಿಲುಗಡೆಗೆ ಕಾಯ್ದಿರಿಸಿದ ಜಾಗೆಗಳು. ಪಾದಚಾರಿ ಮಾರ್ಗಗಳು ಹಾಗೂ ಇತರೆ ಸ್ಥಳಗಳಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿವೆ. ಅಕ್ರಮ ಚಟುವಟಿಕೆದಾರರು ಯಾವುದೇ ಪರವಾನಿಗೆ ಪಡೆಯದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಅನಧಿಕೃತ ವ್ಯವಹಾರ…

Read More

ಅಕ್ರಮ ಅಕ್ಕಿ ಸಾಗಾಟ:ಆಹಾರ ಇಲಾಖೆ ದಾಳಿ, ಅಕ್ಕಿ ವಶ

ಸಪ್ತಸಾಗರ ವಾರ್ತೆ , ವಿಜಯಪುರ,ಮಾ 6:ನಗರದ ಆರ್ ಎನ್ಎಸ್ ಶೋ ರೂಮ್ ಹತ್ತಿರ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ,ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ.ಆರ್ ಎನ್ಎಸ್ ಶೋ ರೂಮ್ ಹತ್ತಿರ ಲಾರಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, 35,060 ಕೆಜಿ ಅಕ್ಕಿ‌ ಹಾಗೂ ಲಾರಿ ವಶಕ್ಕೆ ಪಡೆದು ಟಿ.ರಾಜು ಎಂಬುವವರ ಮೇಲೆ ಜಲ ನಗರ…

Read More

ಅಕ್ರಮವಾಗಿ ಗೃಹಬಳಕೆ ಸಿಲಿಂಡರ್ ಬಳಕೆ:ಆಹಾರ ಇಲಾಖೆ ದಾಳಿ-ವಶ

ಸಪ್ತಸಾಗರ ವಾರ್ತೆ, ವಿಜಯಪುರ,ಜ.15 :ವಿಜಯಪುರ ನಗರದ ಗೋಲ್ ಗುಂಬಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಿಂಭಾಗದ ಹಳೆಯ ಪಾಳುಬಿದ್ದ ಮನೆಯಲ್ಲಿ ಗೃಹ ಬಳಕೆ ಸಿಲಿಂಡರ್ ಬಳಸಿ‌ ಅಕ್ರಮವಾಗಿ ವಾಣಿಜ್ಯ ಬಳಕೆಯ ಸಿಲಿಂಡರ್ ತುಂಬಿಸುತ್ತಿದ್ದ ಸ್ಥಳಕ್ಕೆ ಆಹಾರ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿ ದಾಳಿ ನಡೆಸಿ,41 ಗೃಹ ಬಳಕೆ ಸಿಲಿಂಡರ್ , 21 ವಾಣಿಜ್ಯ ಬಳಕೆ ಸಿಲಿಂಡರ್, ಮೋಟಾರ್ ಯಂತ್ರ ಮತ್ತು ತೂಕದ ಯಂತ್ರಗಳನ್ನು ವಶಕ್ಕೆ ಪಡೆದುಕೊಂಡು, ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ…

Read More

ಅಕ್ರಮವಾಗಿ ಗೃಹ ಬಳಕೆ ಸಿಲಿಂಡರ್ ಮಾರಾಟ : ಆಹಾರ ಇಲಾಖೆ ಅಧಿಕಾರಿಗಳ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 6: ವಿಜಯಪುರ ನಗರದ ಹುಡ್ಕೋ ಹಾಗೂ ರಾಘವೇಂದ್ರ ಕಾಲೋನಿ ಹತ್ತಿರದಲ್ಲಿ ಗೃಹ ಬಳಕೆ ಸಿಲಿಂಡರ್ ಗಳನ್ನು ಬಳಸಿ ಅಕ್ರಮವಾಗಿ ಆಟೋಗಳಿಗೆ ತುಂಬಿಸುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ನಾಲ್ಕು ಗೃಹ ಬಳಕೆ ಸಿಲಿಂಡರ್ ಹಾಗೂ ತೂಕ ಮಾಡುವ ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ.ದಾಳಿಯಲ್ಲಿ ಆಹಾರ ಇಲಾಖೆ ನಿರೀಕ್ಷಕ ವಿಜಯಕುಮಾರ ಗುಮಶೆಟ್ಟಿ, ಜಲನಗರ ಪೊಲೀಸ್ ಠಾಣೆ ಸಬ್ ಇನ್ಸಪೆಕ್ಟರ್ ಮಹೇಶ ಸಂಖ, ಪೋಲಿಸ ಸಿಬ್ಬಂದಿಗಳಾದ ವಿ.ಎಂ.ಪವಾರ, ಪಿ.ಆರ್.ರಾಠೋಡ, ಎಸ್.ವಾಯ್.ನಾಟಿಕಾರ, ಎಚ್.ಎನ್.ಪೂಜಾರಿ, ಎನ್.ಬಿ.ಚವ್ಹಾಣ,…

Read More

ಅಕ್ರಮ ಪಡಿತರ ಅಕ್ಕಿ ವಶ: ಪೊಲೀಸರ ದಾಳಿ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 14:ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ಯನ್ನು ಪೊಲೀಸರು ಲಾರಿ ಸಮೇತ ವಶಪಡಿಸಿಕೊಂಡಿದ್ದಾರೆ.ಖಚಿತ ಮಾಹಿತಿಯನ್ನು ಆಧರಿಸಿ ನಗರದ ವಿಜಯಾ ಟಾಯರ್ಸ್ ಮುಖ್ಯ ರಸ್ತೆಯಲ್ಲಿ ಪೊಲೀಸರು ಆಹಾರ ಇಲಾಖೆ ಜೊತೆಗೆ ಹಠಾತ್ ದಾಳಿ ನಡೆಸಿ 4,76,310 ಮೌಲ್ಯದ 210.43 ಕ್ವಿಂಟಲ್ ಅಕ್ಕಿ ಹಾಗೂ 5 ಲಕ್ಷ ಮೌಲ್ಯದ ಅಶೋಕ ಲೇಲ್ಯಾಂಡ್ ಲಾರಿ ವಶಪಡಿಸಿಕೊಳ್ಳಲಾಗಿದೆ. ಆರೋಪಿತರಾದ ಅಥಣಿ ತಾಲೂಕಿನ ಆಜೂರ ಗ್ರಾಮದ ಗಜಾನನ ಮಕಾಳೆ, ಅಥಣಿ ತಾಲೂಕಿನ ಗಣೇಶವಾಡಿ ನಿವಾಸಿ ಮಾರುತಿ ದೊಡಮನಿ, ಬೆಳಗಾವಿ ಆಝಾದ…

Read More

ಗೃಹ ಬಳಕೆ ಸಿಲಿಂಡರ್ ಅನಧಿಕೃತ ರಿಫಿಲಿಂಗ್ : ಆಹಾರ ಇಲಾಖೆ ದಾಳಿ, ಸಿಲಿಂಡರ್ ವಶಕ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.8: ಗೃಹ ಬಳಕೆಯ ಸಿಲಿಂಡರ್ ಗಳಿಂದ ಅನಧಿಕೃತವಾಗಿ ರಿಫಿಲಿಂಗ್ ಮಾಡುತ್ತಿರುವ ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, 31920 ರೂ. ಮೌಲ್ಯದ ಒಟ್ಟು 10 ಹೆಚ್‍ಪಿ ಕಂಪನಿ ಸಿಲಿಂಡರ್ ಗಳನ್ನು ವಶಪಡಿಸಿಕೊಂಡಿದ್ದಾರೆ.ವಿಜಯಪುರ ನಗರದ ಇಬ್ರಾಹಿಂ ರೋಜಾ ಹತ್ತಿರದಲ್ಲಿ ಪತ್ರಾಸ ಶೆಡ್‍ನಲ್ಲಿ ಹಾಗೂ ನಗರದ ಬಾಗಲಕೋಟೆ ಕ್ರಾಸ್ ಹತ್ತಿರದ ಒಂದು ಪತ್ರಾಸ್ ಶೆಡ್‍ನಲ್ಲಿ ಅನಧಿಕೃತವಾಗಿ ಗೃಹ ಬಳಕೆ ಎಲ್‍ಪಿಜಿ ಸಿಲಿಂಡರ್ ಸಂಗ್ರಹಣೆ ಮಾಡಿ ರಿಫಿಲಿಂಗ್ ಮಾಡುತ್ತಿದ್ದ ಸ್ಥಳದಲ್ಲಿ ಅಧಿಕಾರಿಗಳು ದಾಳಿ ನಡೆಸಿ, ಸಿಲಿಂಡರ್…

Read More

ಅಕ್ರಮ ಅಕ್ಕಿ ಸಾಗಾಟ: ಅಕ್ಕಿ ವಶ

ಸಪ್ತಸಾಗರ ವಾರ್ತೆ, ವಿಜಯಪುರ,ಸೆ.7:ನಗರ ಹೊರ ವಲಯದ ಭೂತನಾಳ ಕೆರೆಯ ಹತ್ತಿರ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ,ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ.ಭೂತನಾಳ ಕೆರೆ ಹತ್ತಿರ ಲಾರಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ರೂ.7,83,760‌ ಮೌಲ್ಯದ 346 ಕ್ವಿಂಟಲ್ 26 ಕೆಜಿ ಅಕ್ಕಿ‌ ಹಾಗೂ ಲಾರಿ ವಶಕ್ಕೆ ಪಡೆದು ಶೇಖರ ಮದ್ಯೆಯನ್ ಎಂಬುವವರ ಮೇಲೆ ಆದರ್ಶ…

Read More