ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ; ರಾಜೀನಾಮೆ ಪತ್ರ ವಾಪಸ್
ಸಪ್ತಸಾಗರ ವಾರ್ತೆ,ವಿಜಯಪುರ, ಆ. 5: ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಇದೀಗ ತಮ್ಮ ರಾಜೀನಾಮೆ ಪತ್ರವನ್ನು ಹಿಂಪಡೆದಿದ್ದಾರೆ.ಆಗಸ್ಟ್ 3ರಂದು ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಅವರು, ವಿಧಾನಸಭಾಧ್ಯಕ್ಷರಿಗೆ ರಾಜೀನಾಮೆ ಪತ್ರ ನೀಡಿದ್ದರು. ಈ ನಡೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.ಆದರೆ, ಯಾವುದೇ ಅಧಿಕೃತ ಕಾರಣವನ್ನು ಬಹಿರಂಗಪಡಿಸದೇ ಯಶವಂತರಾಯಗೌಡ ಪಾಟೀಲ…


