
ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರ ಯುವತಿ ಶಿಫಾ ಭಾಗಿ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 15:ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಇದೇ ದಿ.೨೨ ರಿಂದ ಸೆ.೩೦ ರವರೆಗೆ ಎಂಟು ದಿನಗಳ ಕಾಲ ನಡೆಯಲಿರುವ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದ ಯುವ ಪ್ರತಿನಿಧಿ ಮಂಡಳದ ನೇತೃತ್ವವನ್ನು ವಿಜಯಪುರ ಯುವತಿ ಕು.ಶಿಫಾ ಜಮಾದಾರ ವಹಿಸಲಿರುವುದು ಜಿಲ್ಲೆಯ ಇತಿಹಾಸದಲ್ಲಿ ಹೊಸ ಮೈಲುಗಲ್ಲು.ಇದೇ ಪ್ರಥಮ ಬಾರಿಗೆ ಜಾಗತಿಕ ಮಟ್ಟದ ಶೃಂಗ ಸಭೆಯಲ್ಲಿ ವಿಜಯಪುರ ಯುವ ಪ್ರತಿಭೆಯೊಬ್ಬರು ಭಾರತ ದೇಶವನ್ನು ಪ್ರತಿನಿಧಿಸುತ್ತಿದ್ದಾರೆ.ವಿಶ್ವ ಅಣು ದಿನಾಚರಣೆ ಅಂಗವಾಗಿ ರಷ್ಯಾ ಸರ್ಕಾರ ತನ್ನ ರಾಜಧಾನಿಯಲ್ಲಿ ಸೆ.೨೨…