ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ
ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ. 15 : ರಾಜ್ಯ ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರವು ‘ಕರ್ತವ್ಯ’ (KAAMS – Karnataka Advanced Attendance Management System) ಎಂಬ ನೂತನ ಮುಂದುವರಿದ ಹಾಜರಾತಿ ನಿರ್ವಹಣಾ ತಂತ್ರಜ್ಞಾನವನ್ನು ಜಾರಿಗೆ ತಂದಿದೆ.ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಇಲಾಖಾ ಕಾರ್ಯದರ್ಶಿಗಳೊಂದಿಗೆ ನಡೆಸಿದ ಮೊದಲ ಸಭೆಯಲ್ಲೇ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು ಕಚೇರಿ ವೇಳೆಯಲ್ಲಿ ಕಡ್ಡಾಯವಾಗಿ ಶೇ.100ರಷ್ಟು ಹಾಜರಿರಬೇಕು ಮತ್ತು ಸಾರ್ವಜನಿಕರ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು…


