ಮೇ 4ರಂದು ಮಹಿಳಾ ವಿವಿಗೆ ತನಿಖಾ ತಂಡ ಭೇಟಿ:ಅಕ್ಕಮಹಾದೇವಿ ವಿವಿಯಲ್ಲಿ ಪಿಎಚ್.ಡಿ ಅಕ್ರಮ ಪ್ರಕರಣ

ಸಪ್ತಸಾಗರ ವಾರ್ತೆ ವಿಜಯಪುರ, ಮೇ. 3:ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಪ್ರದಾನ ಪ್ರಕ್ರಿಯೆಯಲ್ಲಿ ನಡೆದಿರುವ ನಿಯಮ ಉಲ್ಲಂಘನೆಗಳು ಮತ್ತು ಅಕ್ರಮಗಳ ಕುರಿತು ತನಿಖೆ ನಡೆಸಲು ಮೇ 4 ಪರಿಶೀಲನಾ ತಂಡವು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಲಿದೆ ಎಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ರಾಜ್ಯಾಧ್ಯಕ್ಷ ಅಕ್ಷಯಕುಮಾರ್ ಅಜಮನಿ ತಿಳಿಸಿದ್ದಾರೆ.ವಿಶ್ವವಿದ್ಯಾಲಯದಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ದ್ರಾವಿಡ ವಿದ್ಯಾರ್ಥಿ ಪರಿಷತ್ ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ಕಳೆದ ತಿಂಗಳು ರಾಜ್ಯಪಾಲರ ಭೇಟಿ ಸಂದರ್ಭದಲ್ಲಿ ಮನವಿ ಸಲ್ಲಿಸಲು ಜಿಲ್ಲಾಡಳಿತ ಅವಕಾಶ ನಿರಾಕರಿಸಿದ್ದಕ್ಕೆ…

Read More