
ಭೀಮಾನದಿ ಪ್ರವಾಹ ಪೀಡಿತ ಗ್ರಾಮಗಳಿಗೆಶಾಸಕ, ಡಿಸಿ ಭೇಟಿ, ಪರಿಶೀಲನೆ: ಸಂತ್ರಸ್ಥರ ಸಮಸ್ಯೆ ಆಲಿಕೆ
ಸಪ್ತಸಾಗರ ವಾರ್ತೆ ವಿಜಯಪುರ, ಸೆ.೨೭: ಭೀಮಾನದಿ ಪ್ರವಾಹಕ್ಕೆ ಒಳಗಾಗಿರುವ ಸಿಂದಗಿ ಮತಕ್ಷೇತ್ರದ ವಿವಿಧ ಗ್ರಾಮಗಳಿಗೆ ಕ್ಷೇತ್ರದ ಶಾಸಕ ಅಶೋಕ ಮನಗೂಳಿ, ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ. ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂತ್ರಸ್ಥರ ಸಮಸ್ಯೆಗಳನ್ನು ಆಲಿಸಿದರು.ಶನಿವಾರ ಭೀಮಾನದಿ ಪ್ರವಾಹ ಪೀಡಿತ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಪ್ರವಾಹಕ್ಕೊಳಗಾಗಿರುವ ಪ್ರದೇಶಗಳಲ್ಲಿ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ ಶಾಸಕರು, ಈ…