ತಿಕೋಟ- ಬಬಲೇಶ್ವ ತಾಲೂಕಿನ ವಿವಿಧ ಕಚೇರಿಗಳಿಗೆ ಡಿಸಿ ಭೇಟಿ, ಪರಿಶೀಲನೆ
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 10:ವಿವಿಧ ಪ್ರಮಾಣ ಪತ್ರಗಳನ್ನು ಸಾರ್ವಜನಿಕರಿಗೆ ಸಕಾಲಕ್ಕೆ ವಿತರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.ಬುಧವಾರ ಬಬಲೇಶ್ವರ ತಾಲೂಕಿನ ಮಮದಾಪುರ ನಾಡಕಚೇರಿಯ ಅಟಲ್ ಜನಸ್ನೇಹಿ ಕೇಂದ್ರದಲ್ಲಿ ನೀಡಲಾಗುವ ವಿವಿಧ ಪ್ರಮಾಣ ಪತ್ರಗಳ ಹಾಗೂ ಪಿಂಚಣಿ ಯೋಜನೆಗಳನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ಅಟಲ್ ಜನಸ್ನೇಹಿ ಕೇಂದ್ರದಲ್ಲಿ ನೀಡಲಾಗುವ ವಿವಿಧ ಪ್ರಮಾಣ ಪತ್ರಗಳನ್ನು ಸಾರ್ವಜನಿಕರಿಗೆ ಸಕಾಲಕ್ಕೆ ವಿತರಿಸಬೇಕು ಎಂದು ಸೂಚಿಸಿದ ಅವರು, ಬಳಿಕ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.ಇದಕ್ಕೂ ಮೊದಲು ಗ್ರಾಮದಲ್ಲಿ ಅರಣ್ಯ…


