
ಅ. 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ ಸೂಚನೆ
ಸಪ್ತಸಾಗರ ವಾರ್ತೆ ವಿಜಯಪುರ,ಸೆ.24:ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಯೋಜನೆ ಮಾಡುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದರು.ಸಾರ್ವಜನಿಕರಿಗೆ ಮಹಾತ್ಮ ಗಾಂಧೀಜಿಯವರ ಬದುಕು, ಆದರ್ಶ ಹಾಗೂ ಅವರ ಜೀವನ…