ಡಾಗ್ ಶೆಲ್ಟರ್ ನಿರ್ಮಾಣಕ್ಕೆ ಕ್ರಮ ವಹಿಸಿ : ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ.10: ಸರ್ವೋಚ್ಛ ನ್ಯಾಯಾಲಯದ ತೀರ್ಪಿನಂತೆ ಬೀದಿ ನಾಯಿಗಳಿಗೆ ಆಶ್ರಯ ಒದಗಿಸಲು ಬುರಾಣಪುರದಲ್ಲಿ ಕಾಯ್ದಿರಿಸಿದ ಎರಡು ಎಕರೆ ಜಾಗದಲ್ಲಿ ಡಾಗ್ ಶೆಲ್ಟರ್ ನಿರ್ಮಾಣಕ್ಕಾಗಿ ನೀಲ ನಕ್ಷೆ ತಯಾರಿಸಿ ಸಲ್ಲಿಸುವಂತೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದ್ದಾರೆ.ಸೋಮವಾರ ನಗರದ ಬುರಾಣಪುರದಲ್ಲಿರುವ ಗೋಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ, ಡಾಗ್ ಶೆಲ್ಟರ್ ನಿರ್ಮಾಣಕ್ಕೆ ಸೂಚನೆ ನೀಡಿ, ಗೋಶಾಲೆಗಳಲ್ಲಿರುವ ಜಾನುವಾರುಗಳನ್ನು ಕಾಳಜಿಯಿಂದ ನೋಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ…

Read More

ಜಿಲ್ಲೆಯಲ್ಲಿ ನ.1 ರಿಂದ ಕಬ್ಬು ನುರಿಸುವ ಕಾರ್ಯ ಆರಂಭಿಸಿ: ಜಿಲ್ಲಾಧಿಕಾರಿ ಡಾ. ಆನಂದ ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 4: ಜಿಲ್ಲೆಯಲ್ಲಿ ಪಕ್ವವಾಗಿರುವ ಕಬ್ಬನ್ನು ಆದ್ಯತೆಯ ಮೇಲೆ ಕಟಾವು ಮಾಡಿ ನವೆಂಬರ್ 1 ರಿಂದ ಕಬ್ಬು ನುರಿಸುವ ಕಾರ್ಯ ಆರಂಭಿಸಿ ಕಬ್ಬು ಪೂರೈಸಿದ ರೈತರಿಗೆ 14 ದಿನಗಳೊಳಗಾಗಿ ಕಬ್ಬಿನ ಹಣ ಪಾವತಿಸಲು ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂಚನೆ ನೀಡಿದ್ದಾರೆ.ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಭೆ ನಡೆಸಿದ ಅವರು, ಆಯುಕ್ತರು ಕಬ್ಬು ಅಭಿವೃದ್ದಿ ಹಾಗೂ ಸಕ್ಕರೆ ನಿರ್ದೇಶನಾಲಯ ಬೆಂಗಳೂರು ಇವರು ಪ್ರಸಕ್ತ…

Read More

ಭಾಗ್ಯಲಕ್ಷ್ಮಿ ಯೋಜನೆ: ದಾಖಲೆ‌ ಸಲ್ಲಿಸಲು ಸೂಚನೆ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 23:2006-07ನೇ ಸಾಲಿನಲ್ಲಿ ಜನಿಸಿದ ಹೆಣ್ಣು ಮಕ್ಕಳಿಗೆ ಪ್ರಸಕ್ತ ಸಾಲಿನಲ್ಲಿ 18 ವರ್ಷ ಪೂರ್ಣಗೊಂಡಿದ್ದು, ಭಾಗ್ಯಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳು ಯೋಜನೆಯ ಮೊತ್ತ ಪಡೆಯಲು ಅಗತ್ಯ ದಾಖಲಾತಿಗಳನ್ನು ಅಕ್ಟೋಬರ್ 30ರೊಳಗಾಗಿ ವಿಜಯಪುರ (ಗ್ರಾಮೀಣ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆಯೂ ಈ‌‌ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರ (ಗ್ರಾಮೀಣ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಬೆಳೆ ಹಾನಿ ಸಮೀಕ್ಷೆಯಲ್ಲಿ ಅರ್ಹ ರೈತರು ಕೈ ಬಿಟ್ಟುಹೋಗದಂತೆ ನಿಗಾ ವಹಿಸಿ: ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 22: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಕೆಲವು ತಾಲೂಕಿನಲ್ಲಿ ರೈತರ ಬೆಳೆ ಹಾನಿಯಾಗಿದ್ದು, ಅತಿವೃಷ್ಟಿಯಿಂದಾಗಿ ಬೆಳೆ ಹಾನಿ ಕುರಿತು ಕೈಗೊಂಡ ಜಂಟಿ ಸಮೀಕ್ಷೆಯಲ್ಲಿ ಯಾವುದೇ ಅರ್ಹ ರೈತರ ಜಮೀನು ಕೈಬಿಟ್ಟು ಹೋಗದಂತೆ ನಿಗಾವಹಿಸಿ ಸರ್ಮಪಕ ಸಮೀಕ್ಷೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು.ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬೆಳೆ ಹಾನಿ ಸಮೀಕ್ಷೆಯಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸಬಾರದು….

Read More

ಗ್ರಾಮೀಣರ ಬದುಕು ಸುಧಾರಣೆಗೆ ಆದ್ಯತೆ ನೀಡಿ-ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 11: ಜಿಲ್ಲೆಯ ಗ್ರಾಮೀಣ ಜನರ ಜೀವನ ಸುಧಾರಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ತತ್‌ಕ್ಷಣ ಸ್ಪಂದಿಸಿ, ಪರಿಹಾರ ಒದಗಿಸಲು ಹಾಗೂ ಮೂಲಸೌಲಭ್ಯಗಳನ್ನು ಆದ್ಯತೆ ಮೇಲೆ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಗ್ರಾಮೀಣ ಭಾಗದ ಜನರು ಯಾವುದೇ ಮೂಲಭೂತ ಸೌಲಭ್ಯಗಳಿಂದ…

Read More