ಮಹಾನ್ ಹೋರಾಟಗಾರರ ತ್ಯಾಗ ಯುವಜನತೆಗೆ ಸ್ಫೂರ್ತಿ: ಜಗದೇವ ಸೂರ್ಯವಂಶಿ
ವಿಜಯಪುರದಲ್ಲಿ ಹೈದರಾಬಾದ್ ವಿಮೋಚನಾ ದಿನಾಚರಣೆ ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 17:ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳು ಇಂದಿನ ಯುವಜನಾಂಗಕ್ಕೆ ಸ್ಫೂರ್ತಿಯಾಗಿವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ರಾಜ್ಯಾಧ್ಯಕ್ಷ ಜಗದೇವ ಸೂರ್ಯವಂಶಿ ಹೇಳಿದರು.ನಗರದ ವಲ್ಲಭಭಾಯಿ ಪಟೇಲ ವೃತ್ತದಲ್ಲಿ ವಿಜಯಪುರ ಜಿಲ್ಲಾ 371(ಜೆ) ಹೋರಾಟ ಸಮಿತಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ವತಿಯಿಂದ ಆಯೋಜಿಸಿದ್ದ ಹೈದರಾಬಾದ್ ವಿಮೋಚನಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.ಆಪರೇಷನ್ ಪೋಲೊ ಮೂಲಕ ಹೈದರಾಬಾದ್ ಪ್ರಾಂತವನ್ನು ಭಾರತದ ಒಕ್ಕೂಟಕ್ಕೆ ಸೇರ್ಪಡೆಗೊಳಿಸುವಲ್ಲಿ…


