2027ರ ಜನವರಿ ಅಂತ್ಯದೊಳಗೆ ವಿಜಯಪುರದಿಂದ ವಿಮಾನ ಹಾರಾಟ
ಅಂತಿಮ ಹಂತ ತಲುಪಿದ ವಿಮಾನ ನಿಲ್ದಾಣ ಕಾಮಗಾರಿ ಸಪ್ತಸಾಗರ ವಾರ್ತೆ,ವಿಜಯಪುರ, ಆ.21: ಬಹುನಿರೀಕ್ಷಿತ ವಿಜಯಪುರ ವಿಮಾನ ನಿಲ್ದಾಣದಿಂದ 2027ರ ಜನವರಿ ಅಂತ್ಯದೊಳಗೆ ವಿಮಾನ ಹಾರಾಟ ಆರಂಭಿಸುವ ಪ್ರಯತ್ನ ನಡೆಯುತ್ತಿದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ (ಕೆಎಸ್‌ಐಐಡಿಸಿ) ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹೇಳಿದರು.ಶುಕ್ರವಾರ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲಿಸಿದ ಬಳಿಕ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಪರಿಸರ ಇಲಾಖೆಯ ಅನುಮತಿ ವಿಳಂಬ ಹಾಗೂ ಸುಪ್ರೀಂ ಕೋರ್ಟ್‌ನ ತಡೆಯಾಜ್ಞೆಯಿಂದ…


