ಫೆ. 2ರಂದು ವಿಜಯಪುರದಲ್ಲಿ ಬೃಹತ್ ಉದ್ಯೋಗ ಮೇಳ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 30:ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಹಾಗೂ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಇವರ ಸಹಯೋಗದಲ್ಲಿ ಫೆ.2ರಂದು ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಯುವ ಸಮೃದ್ಧಿ ಸಮ್ಮೇಳನ- ವಿಜಯಪುರ ಉದ್ಯೋಗ ಮೇಳವನ್ನು ದರಬಾರ ಹೈಸ್ಕೂಲ್ ಆವರಣದಲ್ಲಿ ಆಯೋಜಿಸಲಾಗಿದೆ.ನಗರದ ಹೊಸ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ ಅವರು ಉದ್ಯೋಗ ಮೇಳದ ಕುರಿತು ವಿವರ ಹಂಚಿಕೊಂಡರು.ಈ ಪತ್ರಿಕಾಗೋಷ್ಠಿಯಲ್ಲಿ ಪಾಲಿಕೆ ಸದಸ್ಯೆ…


