ಮಕ್ಕಳ ಮನೋಲೋಕ ಕುರುಡಾಗಬಾರದು: ಕೆ.ವಿ.ಪ್ರಭಾಕರ

ಸಪ್ತಸಾಗರ ವಾರ್ತೆ ಬೆಂಗಳೂರು, ಸೆ.7:ಮನೆಯೇ ಮೊದಲ ಶಾಲೆ ಎನ್ನುವುದು ಹೋಗಿ ಮೊಬೈಲೇ ಮೊದಲ ಶಾಲೆಯಂತಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.ಪ್ರೆಸ್ ಕ್ಲಬ್ ಮತ್ತು ಬಾಲ ಭವನ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಮಕ್ಕಳ ಜಾತ್ರೆ” ಸಾಂಸ್ಕೃತಿಕ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದರು.ನಗರಗಳಲ್ಲಿ ಇರುವ ಮಕ್ಕಳು ಮಣ್ಣಿನಿಂದ ಬೇರ್ಪಟ್ಟು, ನೆಲದ ಆಟ ಪಾಠಗಳಿಂದ ದೂರ ಆಗಿದ್ದಾರೆ. ವೃದ್ದಾಶ್ರಮಗಳು ಹೆಚ್ಚಾಗುತ್ತಾ ಅಜ್ಜ-ಅಜ್ಜಿ ಕತೆಗಳಿಂದ ಮಕ್ಕಳು ವಂಚಿತರಾಗುತ್ತಿದ್ದಾರೆ. ಜೊತೆಗೆ ತಮ್ಮ ಆಟದ ಸಾಮಾನುಗಳನ್ನು ತಾವೇ ಸೃಷ್ಟಿಸಿಕೊಳ್ಳುವ ಕ್ರಿಯಾಶೀಲತೆಯೂ ಕಾಣೆಯಾಗಿ, ಪ್ಲಾಸ್ಟಿಕ್ ಆಟದ…

Read More

ನೊಂದವರ ರಾಯಭಾರಿಗಳಾಗಿ ಸಮಾಜದ ಋಣ ತೀರಿಸೋಣ: ಪತ್ರಕರ್ತರ ಮಕ್ಕಳಿಗೆ ಕೆ.ವಿ.ಪಿ ಕರೆ

ಸಪ್ತಸಾಗರ ವಾರ್ತೆ, ಕೊಡಗು, ಜು. 28: ನಾವು ಸಮಾಜವನ್ನು ನೋಡುವ ದೃಷ್ಟಿಯನ್ನು ಕಳೆದುಕೊಂಡರೆ ಕಣ್ಣಿರುವ ಕುರುಡರನ್ನು, ಕಿವಿ ಇರುವ ಕಿವುಡರನ್ನು ಸೃಷ್ಟಿಸುತ್ತೇವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು.ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದರು.ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬಗಳಿಗೆ ಸಮಾಜ ವಿಶೇಷ ಗೌರವ ನೀಡುತ್ತದೆ ಮತ್ತು ಸರ್ಕಾರ ವಿಶೇಷ ಸವಲತ್ತುಗಳನ್ನು ಕಲ್ಪಿಸುತ್ತದೆ. ಪತ್ರಕರ್ತರು ಸಮಾಜ ಮತ್ತು ಸರ್ಕಾರದ ನಡುವೆ ಸೇತುವೆಗಳಾಗಿ ಕೆಲಸ ಮಾಡುತ್ತಾರೆ…

Read More