ನಾಡಿಗೆ ಸಮಾನತೆಯ ಸಂದೇಶ ಸಾರಿದ ದಾಸಶ್ರೇಷ್ಠರು ಕನಕದಾಸ: ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ
ಸಪ್ತಸಾಗರ ವಾರ್ತೆ ವಿಜಯಪುರ, ನ. 8: “ಸಮಾಜದಲ್ಲಿದ್ದ ಅಸಮಾನತೆ, ಅನಿಷ್ಠ ಪದ್ಧತಿಗಳ ವಿರುದ್ಧ ತಮ್ಮ ಕೀರ್ತನೆಗಳ ಮೂಲಕ ಸಮರ ಸಾರಿದ ದಾಸಶ್ರೇಷ್ಠರು ಕನಕದಾಸರು. ಅವರ ಚಿಂತನೆಗಳು, ವಿಚಾರಗಳು ಮತ್ತು ಸಮಾಜ ಸುಧಾರಣೆಯ ದೃಷ್ಟಿಕೋನಗಳು ಇಂದಿಗೂ ಪ್ರಸ್ತುತ” ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ವಿಜಯಾ ಬಿ ಕೋರಿಶೆಟ್ಟಿ ಹೇಳಿದರು.ಅವರು ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕನಕದಾಸ ಅಧ್ಯಯನ ಪೀಠದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಕನಕದಾಸ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.“ಮೂಲತಃ…


