ಕನ್ಹೇರಿ ಶ್ರೀಗಳ ಮೇಲಿನ ನಿಷೇಧ ಹಿಂಪಡೆಯದಿದ್ದರೆ ವಿಜಯಪುರ ಬಂದ್ ಗೆ ಕರೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 16: ಸಮಾಜದಲ್ಲಿ ನಡೆಯುತ್ತಿರುವ ಘಟನಾವಳಿಗಳನ್ನು ಯಥಾವತ್ತಾಗಿ ವಿವರಿಸಿದ್ದಕ್ಕೆ ಶ್ರೀ ಕನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಠದ ಸ್ವಾಮೀಜಿಗಳಿಗೆ ವಿಜಯಪುರಕ್ಕೆ ಬರದಂತೆ ಜಿಲ್ಲಾಡಳಿತ ನಿಷೇಧ ಹೇರಿರುವುದನ್ನು ಹಿಂಪಡೆಯದಿದ್ದರೆ ವಿಜಯಪುರದ ಬಂದ್ ಗೆ ಕರೆ ನೀಡಬೇಕಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಎಚ್ಚರಿಸಿದ್ದಾರೆ.ರಾಜಕೀಯ ಪ್ರಾಬಲ್ಯ ಸಾಧಿಸಲು, ವೋಟ್ ಬ್ಯಾಂಕ್ ರಾಜಕಾರಣವನ್ನು ಧಿಕ್ಕರಿಸಲು ಅವರು ಮಾತನಾಡಿದ ಕಾರಣ, ಅವರ ಮೇಲೆ ಈ ಕ್ರಮ ಜರುಗಿಸಲಾಗಿದೆ. ಆತ್ಮನಿರ್ಭರ ಸಮಾಜವನ್ನು ಸ್ಥಾಪಿಸಲು ಅನೇಕ ಉಪಕ್ರಮಗಳನ್ನು…

Read More

ಕನ್ಹೇರಿ ಶ್ರೀಗಳಿಗೆ ಜಿಲ್ಲಾ ಪ್ರವೇಶ ನಿರ್ಬಂಧ: ಜಿಗಜಿಣಗಿ ಖಂಡನೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 16 :ಕನ್ಹೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳ ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧಿಸಿರುವ ಕ್ರಮ ಖಂಡನೀಯ. ಸಂತರನ್ನು ಮುಟ್ಟಿದವರು ಯಾರು ಉಳಿದಿಲ್ಲ. ಜನ ಕಳಕಳಿಯ ಮತ್ತು ಸಮಾಜಮುಖಿ ಸಂತರನ್ನು ಅಡ್ಡಿಪಡಿಸಿ, ಕಾಂಗ್ರೆಸ್ ಸರ್ಕಾರ ತನ್ನ ಸಂಕುಚಿತ ಮನಸ್ಸನ್ನು ಮತ್ತೊಮ್ಮೆ ಸಾಬೀತುಮಾಡಿದೆ ಎಂದು ಸಂಸದ ರಮೇಶ ಜಿಗಜಿಣಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಿಂದೂ ಧರ್ಮದ ಪರವಾಗಿ ಮಾತನಾಡುವೆ. ಅದು ಅಪರಾಧವೇ? ಹಿಂದೂ ದೇವರ ಬಗ್ಗೆ ಅವಹೇಳನದ ಬಗ್ಗೆ…

Read More

ಕನ್ಹೇರಿ ಶ್ರೀಗಳಿಗೆ ಎರಡು ತಿಂಗಳ ಕಾಲ ಜಿಲ್ಲಾ ಪ್ರವೇಶ ನಿರ್ಬಂಧಿಸಿ ಡಿಸಿ ಆದೇಶ

ಸಪ್ತಸಾಗರ ವಾರ್ತೆ ವಿಜಯಪುರ, ಅ. 16:ಮಹಾರಾಷ್ಟ್ರದ ಕನ್ಹೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧಿಸಿಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಆದೇಶ ಹೊರಡಿಸಿದ್ದಾರೆ.ಇತ್ತೀಚೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು ಗ್ರಾಮದಲ್ಲಿ ಸಿಎಂ ಕೃಪಾಪೋಷಿತ ಲಿಂಗಾಯತ ಮಠಾಧೀಶರ ಒಕ್ಕೂಟ ಎಂದು ಪ್ರಚೋದನಕಾರಿ ಭಾಷಣ ಮಾಡಿದ್ದ ಹಿನ್ನೆಲೆ ಕನ್ಹೇರಿ ಶ್ರೀಗಳಿಗೆ ದಿನಾಂಕ 16-10-2025 ರಿಂದ 14-12- 2025 ವರೆಗೆ ಎರಡು ತಿಂಗಳ ಕಾಲ ಜಿಲ್ಲಾ ಪ್ರವೇಶ ನಿರ್ಬಂಧಿಸಿ ಆದೇಶ ಮಾಡಿದ್ದಾರೆ.ಅ. 16, 17 ರಂದು ಬಸವನ ಬಾಗೇವಾಡಿಯಲ್ಲಿ ನಡೆಯುವ…

Read More