ನ.1ರಂದು ಕನ್ನಡ ರಾಜ್ಯೋತ್ಸವ: ಜಿಲ್ಲಾಡಳಿತ ಸಜ್ಜು
ಭುವನೇಶ್ವರಿ ದೇವಿ ಭಾವಚಿತ್ರದ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ ಸಪ್ತಸಾಗರ ವಾರ್ತೆ ವಿಜಯಪುರ, ಅ.15:ನ.1ರಂದು ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಳ್ಳುತ್ತಿದೆ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆ ಕುರಿತು ಚರ್ಚಿಸಲಾಯಿತು.ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದ್ದು, ಕನ್ನಡ ನಾಡು-ನುಡಿ, ಕಲೆ, ಸಂಸ್ಕೃತಿ, ಇತಿಹಾಸ ಹಾಗೂ ಸಾಹಿತ್ಯದ ಹಿರಿಮೆಯನ್ನು ಬಿಂಬಿಸುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲು ನಿರ್ಧರಿಸಲಾಯಿತು.ನ.1ರಂದು ಬೆಳಿಗ್ಗೆ 7.30ಕ್ಕೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ…


