
ಭಾನು ಮುಸ್ತಾಕ್ ಸ್ಪಷ್ಟನೆ ನೀಡಿ ದಸರಾ ಉದ್ಘಾಟಿಸಲಿ: ಯತ್ನಾಳ್
ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 24:ಲೇಖಕಿ ಬಾನು ಮುಸ್ತಾಕ್ ಅವರು ನಾಡದೇವತೆ ಚಾಮುಂಡೇಶ್ವರಿ ದೇವಿ ದಸರಾ ಉತ್ಸವ ಉದ್ಘಾಟಿಸುವುದು ಸರಿಯಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.ನಾನು ವೈಯಕ್ತಿಕವಾಗಿ ಶ್ರೀಮತಿ ಭಾನು ಮುಶ್ತಾಕ್ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ದಸರಾವನ್ನು ಉದ್ಘಾಟಿಸುವುದು, ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ.ಇಸ್ಲಾಂ ಮೂರ್ತಿ…