
ಜಿಲ್ಲೆಯಲ್ಲಿ ಪೌತಿ-ವಾರಸಾ ಖಾತೆ ಆಂದೋಲನ: ಸದುಪಯೋಗಕ್ಕೆಜಿಲ್ಲಾಧಿಕಾರಿ ಡಾ.ಆನಂದ ಕರೆ
ಸಪ್ತಸಾಗರ ವಾರ್ತೆ ವಿಜಯಪುರ, ಜು. 17:ಕೃಷಿ ಜಮೀನಿನ ಮಾಲೀಕರು ಮರಣ ಹೊಂದಿದ ನಂತರ ವಾರಸುದಾರರ ಖಾತೆ ಬದಲಾವಣೆ ಮಾಡಲು ಪೌತಿ-ವಾರಸಾ ಖಾತೆ ಆಂದೋಲನವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ತಿಳಿಸಿದ್ದಾರೆ.ಮಾಲೀಕತ್ವವು ಮೃತರ ವಾರಸುದಾರರ ಹೆಸರಿಗೆ ಬದಲಾವಣೆಯಾಗದಿದ್ದಲ್ಲಿ, ಉಂಟಾಗುವ ಸಮಸ್ಯೆಗಳನ್ನು ಪರಿಹರಿಸಲು ಪೌತಿ-ವಾರಸಾ ಸ್ವರೂಪದ ಮ್ಯುಟೇಷನ್ ಪ್ರಕ್ರಿಯೆಯನ್ನು ಸರಳೀಕೃತಗೊಳಿಸಿ ಪೌತಿ-ವಾರಸಾ ಖಾತೆ ಆಂದೋಲನ ನಡೆಸಲಾಗುತ್ತಿದೆ. ಅಂತಹ ವಾರಸುದಾರರಿಗೆ ಸರ್ಕಾರದಿಂದ ಸಿಗಬಹುದಾದ ಹಲವಾರು ಪ್ರಯೋಜನಗಳಿಂದ ಹಾಗೂ ಜಮೀನು ಅಭಿವೃದ್ಧಿಗೆ ಸಂಬಂಧಿಸಿದ ಸಾಲ…