ಕೆಪಿಎಸ್ಸಿ ಅಧ್ಯಕ್ಷ, ಸದಸ್ಯರ ಬಂಧನ ಸ್ವಾಗತಾರ್ಹ: ಯತ್ನಾಳ
ಸಪ್ತಸಾಗರ ವಾರ್ತೆ,ವಿಜಯಪುರ, ಅ. 6: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಹಾಗೂ ಆಯೋಗದ ಸದಸ್ಯೆ ಗೀತಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.ಕೆಪಿಎಸ್ಸಿಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ಭ್ರಷ್ಟಾಚಾರದ ಕುರಿತು ಸಮಗ್ರ ತನಿಖೆ ನಡೆಸಬೇಕು. ಈ ಹಿಂದೆ ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಅಸೋಸಿಯೇಷನ್ನೊಂದಿಗೆ ತಾವು ರಿಟ್ ಅರ್ಜಿ ಸಲ್ಲಿಸಿದ್ದಾಗಿ ಅವರು ತಿಳಿಸಿದ್ದಾರೆ.ಅರ್ಹತೆ,…


