ರಾಜ್ಯಮಟ್ಟದ ಕೃಷಿ ಸಖಿಯರ ಸಂಘ ಅಸ್ತಿತ್ವಕ್ಕೆ
ಸಪ್ತಸಾಗರ ವಾರ್ತೆ, ವಿಜಯಪುರ, ಅ. 7: ನಗರದ ಕನಕದಾಸ ಬಡಾವಣೆಯಲ್ಲಿ ಇರುವ ಕೃಷಿ ತಂತ್ರಜ್ಞರ ಸಭಾಭವನದಲ್ಲಿ ರಾಜ್ಯಮಟ್ಟದ ಕೃಷಿ ಸಖಿಯರ ಸಮಾವೇಶ ಜರುಗಿತು.ನಿವೃತ್ತ ಸಹ ವಿಸ್ತರಣೆ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಸಮಾವೇಶ ಉದ್ಘಾಟಿಸಿ ಮಾತನಾಡಿ, ಕೃಷಿ ಸಖಿಯರು, ಕೃಷಿ ಇಲಾಖೆ ಹಾಗೂ ರೈತರ ಮಧ್ಯೆ ಕೊಂಡಿಯಾಗಿ ಕೆಲಸವನ್ನು ನಿರ್ವಹಿಸುತ್ತಿದ್ದಾರೆ. ಪಂಚಾಯತ್ ಹಾಗೂ ಇತರೆ ಸಂಸ್ಥೆಯವರು ವಹಿಸಿದ ಜವಾಬ್ದಾರಿಯನ್ನು ಸಮರ್ಪಕವಾಗಿ ಮಾಡುತ್ತಿದ್ದಾರೆ. ಇವರು ಗೌರವಧನದ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದು , ಸಂಘಟಿತರಾಗಿ ಹೆಚ್ಚಿನ ಸೇವೆಯನ್ನು ಸಲ್ಲಿಸಲು…


