ಕುಮಾರಿ ಶಿಫಾ ಜಮಾದಾರಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ
ಸಪ್ತಸಾಗರ ವಾರ್ತೆ, ವಿಜಯಪುರ, ಅ. 13: ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಎಂಟು ದಿನಗಳ ಕಾಲ ನಡೆದ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದಿಂದ ಏಕೈಕ ಯುವ ಪ್ರತಿನಿಧಿಯಾಗಿ ಭಾಗವಹಿಸಿ `ವಿಶ್ವಶಾಂತಿ ಅಗತ್ಯತೆ ಹಾಗೂ ವಿಶ್ವಶಾಂತಿಯಲ್ಲಿ ಭಾರತದ ಪಾತ್ರ’ ಕುರಿತು ಮಹತ್ವಪೂರ್ಣ ಸಂದೇಶ ಸಾರಿ ವಿಜಯಪುರದ ಕೀರ್ತಿಯನ್ನು ಹೆಚ್ಚಿಸಿದ ಕುಮಾರಿ ಶಿಫಾ ಜಮಾದಾರ ಅವರನ್ನು ಕೃಷಿ ಉತ್ಪನ್ನ ಮಾರುಕಟ್ಟೆ, ಜವಳಿ, ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ…


