1ರಿಂದ 19 ವರ್ಷದ ಮಕ್ಕಳಿಗೆ ಅಲ್ಬೆಂಡಾಜೋಲ್ ಮಾತ್ರೆ; ಸ್ವಚ್ಛತೆಗೆ ಆದ್ಯತೆ ನೀಡಿ: ಲಕ್ಷ್ಮೀ ಮೇತ್ರಿ
ಸಪ್ತಸಾಗರ ವಾರ್ತೆ,ಇಂಡಿ, ಆ. 10: ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಜಂತುಹುಳು ಬಾಧೆ ತಡೆಗಟ್ಟಲು ಔಷಧಿ ಸೇವನೆಯ ಜೊತೆಗೆ ವೈಯಕ್ತಿಕ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡಿಕೊಳ್ಳುವುದು ಅತ್ಯಗತ್ಯ ಎಂದು ಸಮುದಾಯ ಆರೋಗ್ಯ ಅಧಿಕಾರಿ ಲಕ್ಷ್ಮೀ ಮೇತ್ರಿ ಹೇಳಿದರು.ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್ ಹಾಗೂ ಯುಬಿಎಸ್ ಶಾಲೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಶುಚಿತ್ವದ ವಾತಾವರಣ ಜಂತುಹುಳು ಬಾಧೆಗೆ ಪ್ರಮುಖ ಕಾರಣವಾಗುತ್ತದೆ. ಹೀಗಾಗಿ ಮಕ್ಕಳು…


