ಕಾಂಗ್ರೆಸ್ ದಿವಾಳಿತನಕ್ಕೆ ಬಿಜೆಪಿಯಿಂದ ವಿಶೇಷ ಕರಪತ್ರ ವಿತರಣೆಗೆ ಚಾಲನೆ
ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 14 :ರಾಜ್ಯದಲ್ಲಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಪೂರೈಸಿದ ಸಾವಿರ ದಿನವನ್ನು ವೈಫಲ್ಯ ಹಾಗೂ ಹಗರಣಗಳಿಂದಲೇ ಪೂರ್ಣಗೊಳಿಸಿದ್ದು ಸರ್ಕಾರದ ವೈಫಲ್ಯ ಪ್ರತಿಬಿಂಬಿಸಲು ಬಿಜೆಪಿ ವಿಶೇಷವಾದ ಕರಪತ್ರ ರಚಿಸಿದ್ದು, ಈ ಫೋಸ್ಟರ್‌ಗಳನ್ನು ಶಿವಾಜಿ ವೃತ್ತದಲ್ಲಿ ಸರ್ಕಾರಿ ಬಸ್ಸುಗಳಿಗೆ ಅಂಟಿಸುವ ಅಭಿಯಾನ ನಡೆಯಿತು.ಈ ಅಭಿಯಾನಕ್ಕೆ ಚಾಲನೆ ನೀಡಿದ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ರಾಜ್ಯ ಸರ್ಕಾರ ಹಗರಣದಲ್ಲಿಯೇ ಕಾಲಹರಣ ಮಾಡುತ್ತಿದೆ, ಖಾಲಿ ಇರುವ ಉದ್ಯೋಗಗಳನ್ನು ಭರ್ತಿ ಮಾಡುತ್ತಿಲ್ಲ, ಅನೇಕ ಯೋಜನೆಗಳ ಹಣವನ್ನು ಗ್ಯಾರಂಟಿಗಳಿಗೆ ಬಳಕೆ ಮಾಡಿ…


