ಅಧಿವೇಶನಕ್ಕೆ ಅಡ್ಡಿ ಸೃಷ್ಟಿಸುವುದು ಕಾಂಗ್ರೆಸ್ ಉದ್ದೇಶ: ರಮೇಶ ಜಿಗಜಿಣಗಿ
ಸಪ್ತಸಾಗರ ವಾರ್ತೆ,ವಿಜಯಪುರ, ಆ. 14:ಸಂಸತ್ತಿನಲ್ಲಿ ದೇಶದ ಜನರ ಸಮಸ್ಯೆಗಳ ಕುರಿತು ಚರ್ಚೆ ನಡೆಸದೆ ಮುಂಗಾರು ಅಧಿವೇಶನ ಸುಸೂತ್ರವಾಗಿ ನಡೆಯಲು ಕಾಂಗ್ರೆಸ್ ಅಡ್ಡಿಪಡಿಸಿದೆ. ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಸುವ ಮೂಲಕ ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಹುನ್ನಾರ ನಡೆಸಿದೆ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದ್ದಾರೆ.ಕಾಂಗ್ರೆಸ್ ಮುಕ್ತ ಭಾರತದತ್ತ ದೇಶದ ಜನರು ಹೆಜ್ಜೆ ಇಡುತ್ತಿರುವುದರಿಂದ ಕಾಂಗ್ರೆಸ್ ಹತಾಶಗೊಂಡಿದೆ. ಚುನಾವಣೆಯಲ್ಲಿ ಸೋತಾಗ ಇವಿಎಂಗಳನ್ನು ದೂಷಿಸುವುದು, ಸಂಸತ್ ಕಲಾಪಕ್ಕೆ ಅಡ್ಡಿಪಡಿಸುವುದು, ದಂಗೆ ಹಾಗೂ ಅಶಾಂತಿಗೆ ಪ್ರಚೋದನೆ ನೀಡುವುದು ಕಾಂಗ್ರೆಸ್‌ನ ನಿರಂತರ ಚಟುವಟಿಕೆಯಾಗಿದೆ ಎಂದು ಅವರು…


