ಸಾಲದ ಬಾಧೆ: ನೇಣಿಗೆ ಶರಣಾದ ರೈತ

ಸಪ್ತಸಾಗರ ವಾರ್ತೆ,ವಿಜಯಪುರ, ಜು.18:ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ ಗ್ರಾಮದಲ್ಲಿ ಸಾಲದ ಬಾಧೆಯಿಂದ ಮನನೊಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.ಪ್ರಾಥಮಿಕ ಮಾಹಿತಿಯಂತೆ, ಮಳೆಯ ಕೊರತೆ ಹಾಗೂ ಸಾಲ ಮರುಪಾವತಿ ಚಿಂತೆಯೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.ಮೃತರನ್ನು ನಾಗಪ್ಪ ಭೀಮಶ್ಯಾ ಅಥರ್ಗಾ (57) ಎಂದು ಗುರುತಿಸಲಾಗಿದೆ. ಅವರು ತಮ್ಮ ತೋಟದ ವಸತಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕುಟುಂಬದ ಮಾಹಿತಿಯ ಪ್ರಕಾರ, ರೈತರು ಕೋಟಕ್ ಮಹೀಂದ್ರ ಬ್ಯಾಂಕ್‌ನಲ್ಲಿ ₹15 ಲಕ್ಷ, ತಡವಲಗಾ ಸಹಕಾರಿ ಸಂಘದಲ್ಲಿ ₹65 ಸಾವಿರ…

Read More

ಸ್ವಂತ ಅಕ್ಕನ ಕೈಯಲ್ಲಿ ತಮ್ಮನ ಅಂತ್ಯ!

ಸಪ್ತಸಾಗರ ವಾರ್ತೆ,ಚಡಚಣ, ಜು. 11: ಕುಟುಂಬದೊಳಗಿನ ಕಲಹವೇ ರಕ್ತಸಿಕ್ತ ದುರಂತಕ್ಕೆ ಕಾರಣವಾದ ಬೆಚ್ಚಿಬೀಳಿಸುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಕ್ರಾಸ್ ರಾಷ್ಟ್ರೀಯ ಹೆದ್ದಾರಿ ಸಮೀಪ ಶನಿವಾರ ಸಂಜೆ ನಡೆದಿದೆ.ಗಂಡ–ಹೆಂಡತಿ ನಡುವಿನ ದೀರ್ಘಕಾಲದ ವೈಮನಸ್ಸಿನ ನಡುವೆ, ಸ್ವಂತ ಅಕ್ಕನೇ ತನ್ನ ತಮ್ಮನ ಹತ್ಯೆ ನಡೆಸಿದ ಆರೋಪ ಕೇಳಿಬಂದಿದ್ದು, ಇಡೀ ಪ್ರದೇಶವನ್ನು ಬೆಚ್ಚಿಬೀಳಿಸಿದೆ. ಹಲಸಂಗಿ ಗ್ರಾಮದ ಬಾಬುಸಾ ಮಹಾದೇವ ಜಮಾದಾರ (35) ಕೊಲೆಯಾದ ದುರ್ದೈವಿ. ಘಟನೆಯಲ್ಲಿ ಅಪ್ಪಾಸಾಹೇಬ ಮುಂಕಾಸೆ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ…

Read More

ಕನಕದಾಸರ ಬದುಕು ನಮ್ಮೆಲ್ಲರ ಬದುಕಿಗೆ ಆದರ್ಶದ ಹೊತ್ತಿಗೆ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 15: ಕನಕದಾಸರ ಕೀರ್ತನೆಗಳು ಸಮಾನತೆ, ಮಾನವೀಯತೆ, ವೈಚಾರಿಕತೆಯ ಆಧಾರದ ಮೇಲೆ ಸ್ವಸ್ಥ ಸಮಾಜ ನಿರ್ಮಿಸುವ ಸಾಮಾಜಿಕ ಕಾಳಜಿ ಹೊಂದಿದ್ದು, ಅವು ಸಾಮಾಜಿಕ ಪರಿವರ್ತನೆಗೆ ದಾರಿದೀಪವಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ರವಿವಾರ ಸಂಜೆ ಶ್ರೀ ಕನಕದಾಸರ ಸಾಹಿತ್ಯ ಪ್ರಚಾರ ಸಮಿತಿ ವತಿಯಿಂದ ಹಮ್ಮಿಕೊಂಡ ರಾಜ್ಯ ಮಟ್ಟದ ಆನ್ ಲೈನ್ 116 ನೇ ಉಪನ್ಯಾಸದಲ್ಲಿ ‘ಕನಕದಾಸರ ಕೀರ್ತನೆಗಳಲ್ಲಿ ಸಾಮಾಜಿಕ ಮೌಲ್ಯಗಳು’ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡಿದರು.ಕನಕದಾಸರ ಬದುಕು ನಮ್ಮೆಲ್ಲರ ಬದುಕಿಗೆ ಆದರ್ಶದ…

Read More

ಜೀವನದ ಮೌಲ್ಯ ಕಲಿಸುವ ಪವಿತ್ರ ಸಂಬಂಧವೇ ವಿವಾಹ -ಚನ್ನಮಲ್ಲಿಕಾರ್ಜುನ ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9: ವಿವಾಹವು ದೈವಿಕ ಮತ್ತು ಪವಿತ್ರ ಸಂಬಂಧವಾಗಿದ್ದು, ಅದು ಜೀವನದ ಮೌಲ್ಯಗಳನ್ನು ಕಲಿಸುತ್ತದೆ ಎಂದು ಮ ಘ ಚ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಶುಕ್ರವಾರ ಸಂಜೆ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪುರಾಣದಲ್ಲಿ ‘ಹೇಮರೆಡ್ಡಿ ಮಲ್ಲಮ್ಮಳ ವಿವಾಹ ಮಹೋತ್ಸವ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಾರಂಭ’ ವನ್ನು ಉದ್ಧೇಶಿಸಿ ಅವರು ಮಾತನಾಡಿದರು.ವಿವಾಹವು ಸಮಾಜದಲ್ಲಿ ಬಹಳ ಮಹತ್ವದ ಸ್ಥಾನ ಪಡೆದಿದೆ. ಇದು ಇಬ್ಬರು ವ್ಯಕ್ತಿಗಳ ನಡುವಿನ…

Read More

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ:ಹೋರಾಟಕ್ಕೆ ಸಂದ ಗೌರವ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 4:ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಗೆ ಜೀವಾವಧಿ ಶಿಕ್ಷೆ ವಿಧಿಸಿರುವ ನ್ಯಾಯಾಲಯದ ತೀರ್ಪನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯ ಸಮಿತಿ ಸ್ವಾಗತಿಸಿದೆ.ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ವಿಮ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ, ಲೈಂಗಿಕ ಶೋಷಣೆಗೆ ಒಳಗಾದ ಸಂತ್ರಸ್ತೆಯರು ನ್ಯಾಯದ ನಿರೀಕ್ಷೆಯನ್ನು ಕಳೆದುಕೊಳ್ಳುತ್ತಿರುವಂತಹ ಪ್ರಸ್ತುತ ದಿನಗಳಲ್ಲಿ ಓರ್ವ ಪ್ರಭಾವಿ ರಾಜಕಾರಣಿಯ ವಿರುದ್ಧದ ಈ ಮಹತ್ವದ ತೀರ್ಪು ಮರುಭೂಮಿಯಲ್ಲಿ ಸಿಕ್ಕ ಓಯಸಿಸ್ ನಂತೆ ಭಾಸವಾಗುತ್ತಿದೆ….

Read More

ಜೀವನ್ಮುಕ್ತಿಗೆ ಗುರೂಪದೇಶ ಬೇಕು:ಡಾ. ಮೇತ್ರಿ

ಸಪ್ತಸಾಗರ ವಾರ್ತೆ, ಜು. 31:ಹಿಂದೂಗಳಿಗೆ ಶ್ರಾವಣ ಮಾಸ ಒಂದು ಪವಿತ್ರ ಹಬ್ಬ. ಸತ್ಸಂಗದಲ್ಲಿ ಪಾಲ್ಗೊಂಡು ಪುರಾಣ ಪ್ರವಚನಗಳನ್ನು ಶ್ರವಣ ಮಾಡಿದರೆ ಆತ್ಮಾನಂದ ಪ್ರಾಪ್ತಿಯಾಗುವುದು. ಎಲ್ಲರೂ ಕ್ರಮವಾಗಿ ಶ್ರವಣ,ಜಪ,ತಪ,ಧ್ಯಾನ ಮತ್ತು ದಾನಗಳೆಂಬ ಪಂಚ ಕ್ರಿಯೆಗಳನ್ನು ಸಿದ್ಧಿಸಿಕೊಳ್ಳಬೇಕೆಂದು ಡಾ.ಸಂಗಮೇಶ ಮೇತ್ರಿಯವರು ಹೇಳಿದರು.ವಿಜಯಪುರ ಕೀರ್ತಿನಗರದ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರವಚನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪ್ರವಚನಕಾರರಾದ ಪ.ಪೂ.ಶ್ರೀ ಸಂಗಮೇಶ ಸ್ವಾಮಿಗಳು ಶ್ರೀ ಸಿದ್ಧಾರೂಢರ ಆಧ್ಯಾತ್ಮಿಕ ಪ್ರವಚನವನ್ನು ಶುಭಾರಂಭ ಮಾಡಿದರು. ಸದ್ಭಕ್ತರು ಪ್ರಪಂಚದೊಡನೆ ಪರಮಾರ್ಥ ಸಾಧಿಸಲು ಗುರು ತೋರುವ ಪಥದಲ್ಲಿ…

Read More