ಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಮೊದಲ ಆದ್ಯತೆಯಾಗಿದೆ: ಕೆವಿಪಿ
ಸಪ್ತಸಾಗರ ವಾರ್ತೆ,ಬೆಂಗಳೂರು ಮೇ 22:ಮಾಧ್ಯಮ ಸಲಹೆಗಾರ ಹೊಣೆಗಾರಿಕೆ ಸವಾಲಿನದ್ದು. ಸದಾ ಎಚ್ಚರದ ಸ್ಥಿತಿಯಲ್ಲಿ ಗಮನಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಬಳಿಕ “ಮಾಧ್ಯಮ ಸಂವಾದ”ದಲ್ಲಿ ಮಾತನಾಡಿದರು.ಮಾಧ್ಯಮ ಸಲಹೆಗಾರ ಹುದ್ದೆ ಪ್ರತೀ ದಿನ ಸವಾಲಿನದ್ದು. ಬೆಳಗ್ಗೆ ಎದ್ದು ಪತ್ರಿಕೆಗಳನ್ನು ತಿರುವಿ ಹಾಕುವವರೆಗೂ ನನಗೆ ದುಗುಡ ಇದ್ದೇ ಇರುತ್ತದೆ. ಈ ಸವಾಲುಗಳನ್ನು ಪ್ರತೀ ದಿನ ನಿರ್ವಹಿಸುತ್ತಿದ್ದೇನೆ…


