ಗ್ರಾಮೀಣರ ಬದುಕು ಸುಧಾರಣೆಗೆ ಆದ್ಯತೆ ನೀಡಿ-ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 11: ಜಿಲ್ಲೆಯ ಗ್ರಾಮೀಣ ಜನರ ಜೀವನ ಸುಧಾರಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ತತ್‌ಕ್ಷಣ ಸ್ಪಂದಿಸಿ, ಪರಿಹಾರ ಒದಗಿಸಲು ಹಾಗೂ ಮೂಲಸೌಲಭ್ಯಗಳನ್ನು ಆದ್ಯತೆ ಮೇಲೆ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಗ್ರಾಮೀಣ ಭಾಗದ ಜನರು ಯಾವುದೇ ಮೂಲಭೂತ ಸೌಲಭ್ಯಗಳಿಂದ…

Read More

ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲರ ಪ್ರವಾಸ

ಸಪ್ತಸಾಗರ ವಾರ್ತೆ, ವಿಜಯಪುರ, ಆ.4:ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಆ.8ರಿಂದ 12 ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಆ.8ರಂದು ಸಂಜೆ ಬೆಳಗಾವಿಯಿಂದ ಜಿಲ್ಲೆಯ ಪಡೇಕನೂರಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.ಆ.9 ಹಾಗೂ 10ರಂದು ಪರಿಶೀಲನೆ ನಡೆಸುವರು.ಆ.11 ರಂದು ಬೆಳಿಗ್ಗೆ 8-30ಕ್ಕೆ ಪಡೇಕನೂರದಿಂದ ಹೊರಟು ವಿಜಯಪುರಕ್ಕೆ ಆಗಮಿಸಿ, ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮತ್ತೆ ಪಡೇಕನೂರಗೆ ಪ್ರಯಾಣ ಬೆಳೆಸಿ ವಾಸ್ತವ್ಯ ಮಾಡಲಿದ್ದಾರೆ.ಆ.12 ರಂದು ಬೆಳಿಗ್ಗೆ 9…

Read More

ವಿಜಯಪುರ: ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಸಪ್ತಸಾಗರ ವಾರ್ತೆ, ಜು. 31:ಇಲ್ಲಿನ ಮಹಾನಗರ ಪಾಲಿಕೆಯ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.ಪಾಲಿಕೆ ಕಚೇರಿಯ ಮೂರು ವಲಯಗಳಲ್ಲಿ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.ಮಹಾನಗರ ಪಾಲಿಕೆಯ ನಿರ್ಲಕ್ಷ್ಯ , ಭ್ರಷ್ಟಾಚಾರದ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ.

Read More

ಮುಳವಾಡ ಪಂಚಾಯತಿ ಕ್ಲರ್ಕ್ ಲೋಕಾಯುಕ್ತ ಬಲೆಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 29:ಲಂಚ ಸ್ವೀಕರಿಸುತ್ತಿದ್ದಾಗ ಜಿಲ್ಲೆಯ ಕೊಲ್ಹಾರ ತಾಲೂಕಿನ ಮುಳವಾಡ ಗ್ರಾಮ ಪಂಚಾಯತಿ ದ್ವಿತೀಯ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಮಲ್ಲಪ್ಪ ಸಾಬು ಹೊಸಕೇರಿ ಲೋಕಾಯುಕ್ತ ಬಲೆಗೆ ಬಿದ್ದ ಮುಳವಾಡ ಗ್ರಾಮ ಪಂಚಾಯತಿ ದ್ವಿತೀಯ ದರ್ಜೆ ಸಹಾಯಕ.ಮುಳವಾಡ ಗ್ರಾಮದ ಕೆಐಎಡಿಬಿ ನಿವೇಶನದ ಇ- ಸ್ವತ್ತು ಉತಾರೆ ಮಾಡಿಕೊಡಲು ನಿವೇಶನದ ಮಾಲೀಕರಿಗೆ 10 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ.ಈ ಬಗ್ಗೆ ನಿವೇಶನ ಮಾಲೀಕ ಲೋಕಾಯುಕ್ತ ಪೊಲೀಸ್ ಠಾಣೆಗೆ ಹಾಜರಾಗಿ ಗ್ರಾಮ ಪಂಚಾಯತಿ ದ್ವಿತೀಯ ದರ್ಜೆ…

Read More