ಶಿಥಿಲ ಶಾಲಾ ಕಟ್ಟಡ ಕಂಡು ಲೋಕಾಯುಕ್ತರ ಕೆಂಗಣ್ಣು!

ಪಡೇಕನೂರ ಶಾಲೆ ಅವ್ಯವಸ್ಥೆಗೆ ಅಧಿಕಾರಿಗಳಿಗೆ ನ್ಯಾಯಮೂರ್ತಿ ಬಿ.ಎಸ್. ಪಾಟೀಲಖಡಕ್ ಸೂಚನೆ ಸಪ್ತಸಾಗರ ವಾರ್ತೆ,ತಾಳಿಕೋಟೆ, ಆ.9: ತಾಲೂಕಿನ ಪಡೇಕನೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲಾವಸ್ಥೆ ಹಾಗೂ ಮೂಲಸೌಕರ್ಯಗಳ ಕೊರತೆ ಕಂಡು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಶಾಲಾ ಕಟ್ಟಡದ ದುರಸ್ತಿಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದರು.ಭಾನುವಾರ ಶಾಲೆಗೆ ದಿಢೀರ್ ಭೇಟಿ ನೀಡಿದ ಅವರು, ಶಾಲೆಯ ನಾಲ್ಕು ಹಳೆಯ ಕೊಠಡಿಗಳ ಮೇಲ್ಛಾವಣಿ, ನೆಲಹಾಸು ಹಾಗೂ ಕಟ್ಟಡದ ಒಟ್ಟಾರೆ…

Read More

ಲಂಚ: ಕೆ. ಬಿ. ಜೆ. ಎನ್. ಎಲ್ ಇಬ್ಬರು ಅಭಿಯಂತರರು ಲೋಕಾಯುಕ್ತ ಬಲೆಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 6:ಲಂಚ ಪಡೆಯುತ್ತಿದ್ದ ಕೆಬಿಜೆಎನ್ ಎಲ್ ಇಬ್ಬರು ಅಭಿಯಂತರರು ಸಾಲೋಟಗಿ ಕಚೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಸೇವಾಲಾಲ್ ಚೌವಾಣ, ಕಿರಿಯ ಅಭಿಯಂತರ ಸಾತಲಿಂಗಪ್ಪ ರೊಡಗಿ ಲೋಕಾಯುಕ್ತ ಬಲೆಗೆ ಬಿದ್ದ ಅಭಿಯಂತರರು.ಕೆಬಿಜೆಎನ್ಎಲ್ ಕೆನಾಲ್ ಕಾಮಗಾರಿ ಪೂರೈಸಿದ 3,71,419 ಮೊತ್ತದ ಬಿಲ್ ಪಾಸ್ ಮಾಡಿ ಮೇಲಾಧಿಕಾರಿ ಕಚೇರಿಗೆ ಕಳುಹಿಸಲು ಅಭಿಯಂತರ ಸೇವಾಲಾಲ್ 10,000 ರೂ. ಹಾಗೂ ಕಿರಿಯ ಅಭಿಯಂತರ ಸಾತಲಿಂಗಪ್ಪ ಅವರು 8,000 ರೂ. ಗಳ ಲಂಚದ ಬೇಡಿಕೆಯನ್ನು ಇಟ್ಟಿದ್ದರು.ನಾನಾಸಾಹೇಬ ರೋಡಗಿ…

Read More

ಭೃಷ್ಟಾಚಾರ: ಕಾರ್ಮಿಕ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 16:ವಿಜಯಪುರ ಜಿಲ್ಲೆಯಲ್ಲಿನ ಕಾರ್ಮಿಕ ಅಧಿಕಾರಿ ಕಛೇರಿಯಲ್ಲಿ ವ್ಯಾಪಕವಾಗಿ ಅವ್ಯವಹಾರ ಮತ್ತು ಭೃಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಜಿಲ್ಲೆಯ ಕಾರ್ಮಿಕ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಿ ಶೋಧನಾ ಕಾರ್ಯ ಕೈಗೊಂಡಿದ್ದಾರೆ.ಕಾರ್ಮಿಕ ಇಲಾಖೆಯಲ್ಲಿ ಅವ್ಯವಹಾರ ಹಾಗೂ ವ್ಯಾಪಕ ಭ್ರಷ್ಟಾಚಾರ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಕಾರಣ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕಾರ್ಮಿಕ ಇಲಾಖೆಯನ್ನು ಶೋಧನೆ ಮಾಡಲು ಶೋಧನಾ ವಾರಂಟ್ ಹೊರಡಿಸಿದ್ದು, ಹೀಗಾಗಿ ವಿಜಯಪುರ ಜಿಲ್ಲೆಯ…

Read More

ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ: ಏಪ್ರಿಲ್ 18 ರಂದು ವಿಶೇಷ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ಬೆಂಗಳೂರು, ಏ. 17:ಭ್ರಷ್ಟಾಚಾರ ನಿರ್ಮೂಲನೆ ಮತ್ತು ಆಡಳಿತ ಸುಧಾರಣೆಯಲ್ಲಿ ಮಹತ್ತರ ಪಾತ್ರ ವಹಿಸಿರುವ ‘ಕರ್ನಾಟಕ ಲೋಕಾಯುಕ್ತ’ ಸಂಸ್ಥೆಯು ತನ್ನ ಯಶಸ್ವಿ ನಾಲ್ಕು ದಶಕಗಳ ಪಯಣವನ್ನು ಪೂರೈಸಿದ್ದು, ಈ ಅಂಗವಾಗಿ 2026ರ ಏಪ್ರಿಲ್ 18, ಶನಿವಾರದಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಉದ್ಘಾಟನೆ ನೆರವೇರಿಸಲಿದ್ದಾರೆ. ಸುಪ್ರೀಂ ಕೋರ್ಟ್‍ನ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಅವರು ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ….

Read More

ಗ್ರಾಮೀಣರ ಬದುಕು ಸುಧಾರಣೆಗೆ ಆದ್ಯತೆ ನೀಡಿ-ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 11: ಜಿಲ್ಲೆಯ ಗ್ರಾಮೀಣ ಜನರ ಜೀವನ ಸುಧಾರಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ತತ್‌ಕ್ಷಣ ಸ್ಪಂದಿಸಿ, ಪರಿಹಾರ ಒದಗಿಸಲು ಹಾಗೂ ಮೂಲಸೌಲಭ್ಯಗಳನ್ನು ಆದ್ಯತೆ ಮೇಲೆ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಗ್ರಾಮೀಣ ಭಾಗದ ಜನರು ಯಾವುದೇ ಮೂಲಭೂತ ಸೌಲಭ್ಯಗಳಿಂದ…

Read More

ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲರ ಪ್ರವಾಸ

ಸಪ್ತಸಾಗರ ವಾರ್ತೆ, ವಿಜಯಪುರ, ಆ.4:ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಆ.8ರಿಂದ 12 ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಆ.8ರಂದು ಸಂಜೆ ಬೆಳಗಾವಿಯಿಂದ ಜಿಲ್ಲೆಯ ಪಡೇಕನೂರಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.ಆ.9 ಹಾಗೂ 10ರಂದು ಪರಿಶೀಲನೆ ನಡೆಸುವರು.ಆ.11 ರಂದು ಬೆಳಿಗ್ಗೆ 8-30ಕ್ಕೆ ಪಡೇಕನೂರದಿಂದ ಹೊರಟು ವಿಜಯಪುರಕ್ಕೆ ಆಗಮಿಸಿ, ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮತ್ತೆ ಪಡೇಕನೂರಗೆ ಪ್ರಯಾಣ ಬೆಳೆಸಿ ವಾಸ್ತವ್ಯ ಮಾಡಲಿದ್ದಾರೆ.ಆ.12 ರಂದು ಬೆಳಿಗ್ಗೆ 9…

Read More

ವಿಜಯಪುರ: ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಸಪ್ತಸಾಗರ ವಾರ್ತೆ, ಜು. 31:ಇಲ್ಲಿನ ಮಹಾನಗರ ಪಾಲಿಕೆಯ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.ಪಾಲಿಕೆ ಕಚೇರಿಯ ಮೂರು ವಲಯಗಳಲ್ಲಿ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.ಮಹಾನಗರ ಪಾಲಿಕೆಯ ನಿರ್ಲಕ್ಷ್ಯ , ಭ್ರಷ್ಟಾಚಾರದ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ.

Read More

ಮುಳವಾಡ ಪಂಚಾಯತಿ ಕ್ಲರ್ಕ್ ಲೋಕಾಯುಕ್ತ ಬಲೆಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 29:ಲಂಚ ಸ್ವೀಕರಿಸುತ್ತಿದ್ದಾಗ ಜಿಲ್ಲೆಯ ಕೊಲ್ಹಾರ ತಾಲೂಕಿನ ಮುಳವಾಡ ಗ್ರಾಮ ಪಂಚಾಯತಿ ದ್ವಿತೀಯ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಮಲ್ಲಪ್ಪ ಸಾಬು ಹೊಸಕೇರಿ ಲೋಕಾಯುಕ್ತ ಬಲೆಗೆ ಬಿದ್ದ ಮುಳವಾಡ ಗ್ರಾಮ ಪಂಚಾಯತಿ ದ್ವಿತೀಯ ದರ್ಜೆ ಸಹಾಯಕ.ಮುಳವಾಡ ಗ್ರಾಮದ ಕೆಐಎಡಿಬಿ ನಿವೇಶನದ ಇ- ಸ್ವತ್ತು ಉತಾರೆ ಮಾಡಿಕೊಡಲು ನಿವೇಶನದ ಮಾಲೀಕರಿಗೆ 10 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ.ಈ ಬಗ್ಗೆ ನಿವೇಶನ ಮಾಲೀಕ ಲೋಕಾಯುಕ್ತ ಪೊಲೀಸ್ ಠಾಣೆಗೆ ಹಾಜರಾಗಿ ಗ್ರಾಮ ಪಂಚಾಯತಿ ದ್ವಿತೀಯ ದರ್ಜೆ…

Read More