
ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ:ಪರಿಹಾರ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವ ಎಂ.ಬಿ.ಪಾಟೀಲ ಸೂಚನೆ
ಸಪ್ತಸಾಗರ ವಾರ್ತೆ, ವಿಜಯಪುರ,ಆ. 6: ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ, ಹಾನಿಗೊಳಗಾಗುವ ಗ್ರಾಮ, ಪ್ರದೇಶಗಳಿಗೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರೀಶಿಲನೆ ನಡೆಸಿ ಕೂಡಲೇ ನಿಯಮಾನುಸಾರ ಪರಿಹಾರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರೂ ಆದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಸೂಚನೆ ನೀಡಿದ್ದಾರೆ.ಜಿಲ್ಲೆಯಲ್ಲಿ ಕಳೆದ ರಾತ್ರಿ ವಾಡಿಕೆಗಿಂತ ಹೆಚ್ಚಾಗಿ ಅಂದರೆ 47ಎಂಎಂ ಮಳೆಯಾಗಿದ್ದು, ಅಲ್ಲದೇ, ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಂಭವವಿರುತ್ತದೆ. ಈ…