ರಮಜಾನ್ ಹಬ್ಬದಲ್ಲಿ ಸಚಿವ ಎಂ. ಬಿ. ಪಾಟೀಲ ಭಾಗಿ
ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 21: ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಶನಿವಾರ ರಂಜಾನ್ ಅಂಗವಾಗಿ ನಗರದ ದಖನಿ ಶಾಹಿ ಈದ್ಗಾದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ. ಉತ್ತಮ ಮಳೆಯಾಗಿ, ಒಳ್ಳೆಯ ಬೆಳೆ ಬೆಳೆಯಲಿ. ಎಲ್ಲೆಡೆ ಶಾಂತಿ, ಸೌಹಾರ್ದತೆ ನೆಲೆಸಲಿ ಎಂದು ಪ್ರಾರ್ಥನೆ ಸಲ್ಲಿಸಿದರು.ಇದೇ ವೇಳೆ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೋಂಡ ನಾನಾ ಮುಖಂಡರು ಮತ್ತು ಜನರೊಂದಿಗೆ ಸಚಿವರು ಶುಭಾಷಯ ವಿನಿಮಯ ಮಾಡಿದರು.ಸಹೋದರತೆ ಮತ್ತು ಸಮಾನತೆ…


