
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ದೇಶ ಪ್ರೇಮ ಇತರರಿಗೆ ಆದರ್ಶ: ಸಚಿವ ಎಂ. ಬಿ. ಪಾಟೀಲ
ಸಪ್ತಸಾಗರ ವಾರ್ತೆ, ವಿಜಯಪುರ, ಆ.16: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ದೇಶಪ್ರೇಮ, ಹೋರಾಟದ ಕಿಚ್ಚು ಸದಾ ಆದರ್ಶವಾಗಿವೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ತಿಕೋಟಾ ತಾಲೂಕಿನ ರತ್ನಾಪುರ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನೆ ಮತ್ತು ಬಬಲೇಶ್ವರ ತಾಲೂಕಿನ ಕಾಖಂಡಕಿ ಬಳಿಯ ಅಗಸನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣನವರ 229ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಸಂಗೊಳ್ಳಿ ರಾಯಣ್ಣ ನಾಡಿನ ಏಕತೆ ಮತ್ತು ಸ್ವಾಭಿಮಾನದ ಶಾಶ್ವತ ಸಂಕೇತ. ಕಿತ್ತೂರು ಸಂಸ್ಥಾನವನ್ನು…