ಬಬಲೇಶ್ವರದಲ್ಲಿ ಮತದಾರರ ಹಕ್ಕಿನ ಮೇಲೆ ದಾಳಿ: ಎಂ.ಬಿ. ಪಾಟೀಲ ಆರೋಪ

ಎಸ್‌ಐಆರ್‌ ಹೆಸರಿನಲ್ಲಿ ಅಕ್ರಮಕ್ಕೆ ಕಡಿವಾಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 26:ಬಬಲೇಶ್ವರ ಮತಕ್ಷೇತ್ರದ ಮತದಾರರ ಹಕ್ಕಿನ ಮೇಲೆ ದಾಳಿ ನಡೆಸಲು ಮುಂದಾದ ಬಿಜೆಪಿಯವರ ಕೃತ್ಯಕ್ಕೆ ಕಡಿವಾಣ ಹಾಕಲಾಗಿದ್ದು, ಇದಕ್ಕೆ ಪ್ರತಿಯಾಗಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ದೇಶದ ವಿವಿಧೆಡೆ ಎಸ್‌ಐಆರ್‌ (ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯ…

Read More

ಇಂಡಿ, ಚಡಚಣ, ತಾಳಿಕೋಟೆ ಸೇರಿ ನಾಲ್ಕು ತಾಲೂಕುಗಳ ಬರ ಅಧಿಸೂಚನೆ ಶೀಘ್ರ: ಎಂ.ಬಿ. ಪಾಟೀಲ

ಸೋಮವಾರದೊಳಗೆ ಕ್ಷೇತ್ರ ಪರಿಶೀಲನೆ ಪೂರ್ಣ; ವರದಿ ಆಧರಿಸಿ ಅಂತಿಮ ಘೋಷಣೆ ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 20:ಬರ ನಿರ್ವಹಣೆ ಕೈಪಿಡಿ-2020ರ ಮೌಲ್ಯಮಾಪನ ಮಾನದಂಡಗಳ ಪ್ರಕಾರ ಇಂಡಿ, ಚಡಚಣ ಮತ್ತು ತಾಳಿಕೋಟೆ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಪರಿಗಣಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಸೋಮವಾರದೊಳಗೆ ನಾಲ್ಕು ತಾಲೂಕುಗಳ ಕ್ಷೇತ್ರ ಪರಿಶೀಲನೆ (ಗ್ರೌಂಡ್ ಟ್ರೂಥಿಂಗ್) ಪೂರ್ಣಗೊಳಿಸಿ, ವರದಿ ಆಧರಿಸಿ ಅಂತಿಮ ಬರ ಅಧಿಸೂಚನೆ ಹೊರಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.ಈ…

Read More

ಅನೇಕತೆಯಲ್ಲಿ ಏಕತೆ ಸಾಧಿಸುವುದೇ ಭಾರತದ ಶಕ್ತಿ: ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 15:ಧಾರ್ಮಿಕ ಪರಂಪರೆ, ಆಧ್ಯಾತ್ಮಿಕತೆ ಹಾಗೂ ಸಾಂಸ್ಕೃತಿಕ ವೈವಿಧ್ಯತೆಯಲ್ಲಿ ಭಾರತ ಜಗತ್ತಿನಲ್ಲಿಯೇ ಶ್ರೇಷ್ಠ ಸ್ಥಾನ ಹೊಂದಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.ಬಬಲೇಶ್ವರ ತಾಲೂಕಿನ ಬೆಳ್ಳುಬ್ಬಿ ಗ್ರಾಮದ ಮಳೆ ಮಲ್ಲೇಶ್ವರ ದೇವಸ್ಥಾನದಲ್ಲಿ ಸೋಮವಾರ ನಡೆದ ಅಜಾತ ನಾಗಲಿಂಗ ಮಹಾಸ್ವಾಮಿಗಳ ಮಹಾಪುರಾಣ ಹಾಗೂ ಭಜನಾ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.ಭಕ್ತಿ, ಜ್ಞಾನ ಮತ್ತು ಸಂಸ್ಕೃತಿಯ ಸಂಗಮವಾಗಿರುವ ಧಾರ್ಮಿಕ ಕಾರ್ಯಕ್ರಮಗಳು ಜನರಲ್ಲಿ ಮಾನವೀಯ ಮೌಲ್ಯಗಳನ್ನು ಜಾಗೃತಗೊಳಿಸುತ್ತವೆ. ಪುರಾಣ ಹಾಗೂ…

Read More

ಬಬಲೇಶ್ವರದ ಜನತೆಯ ಋಣ ತೀರಿಸಲು ನಿರಂತರ ಅಭಿವೃದ್ಧಿ: ಎಂ.ಬಿ. ಪಾಟೀಲ

ಮಠಮಾನ್ಯಗಳಿಗೆ ಸದಾ ಬೆನ್ನೆಲುಬಾಗಿ ನಿಲ್ಲುವೆ; ದಾಸೋಹಕ್ಕೆ ₹10 ಲಕ್ಷ ನೆರವು ಸಪ್ತಸಾಗರ ವಾರ್ತೆ,ಬಬಲೇಶ್ವರ, ಸೆ. 14:ಬಬಲೇಶ್ವರದ ಜನತೆ ನೀಡಿರುವ ಪ್ರೀತಿ, ವಿಶ್ವಾಸದ ಋಣ ತೀರಿಸಲು ನಿರಂತರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದರ ಜೊತೆಗೆ ಇಲ್ಲಿನ ಮಠಮಾನ್ಯಗಳಿಗೆ ಸದಾ ಬೆನ್ನೆಲುಬಾಗಿ ನಿಲ್ಲುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.ಬಬಲೇಶ್ವರ ಪಟ್ಟಣದ ಶ್ರೀ ಗುರುಪಾದೇಶ್ವರ ಸಂಸ್ಥಾನ ಬೃಹನ್ಮಠದಲ್ಲಿ ಭಾನುವಾರ ಸಂಜೆ ನಡೆದ ಡಾ. ಮಹಾದೇವ ಶಿವಾಚಾರ್ಯ ಮಹಾಸ್ವಾಮಿಗಳ ವಜ್ರ ಮಹೋತ್ಸವ, ತುಲಾಭಾರ ಹಾಗೂ ಗುರು ಪಟ್ಟಾಧಿಕಾರ…

Read More

ಬೆಳೆ ಹಾನಿಯ ನಿಖರ ಅಂದಾಜು ಸಲ್ಲಿಸಿ: ಅಧಿಕಾರಿಗಳಿಗೆ ಎಂ.ಬಿ. ಪಾಟೀಲ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಶೇ.87.7ರಷ್ಟು ಬಿತ್ತನೆ; ಮಳೆ ಕೊರತೆಯಿಂದ ತೊಗರಿ, ಹತ್ತಿ, ಕಬ್ಬು, ಸೂರ್ಯಕಾಂತಿಗೆ ತೇವಾಂಶದ ಹೊಡೆತ ಸಪ್ತಸಾಗರ ವಾರ್ತೆ | ವಿಜಯಪುರ, ಆ.10:ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬಿತ್ತನೆಯಾದ ಬೆಳೆಗಳಿಗೆ ತೇವಾಂಶದ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ, ರೈತರ ಜಮೀನುಗಳಿಗೆ ತೆರಳಿ ಬೆಳೆ ಹಾನಿಯ ನಿಜವಾದ ಸ್ಥಿತಿಯನ್ನು ಪರಿಶೀಲಿಸಿ, ಫೋಟೋಗಳೊಂದಿಗೆ ವೈಜ್ಞಾನಿಕ ಹಾಗೂ ನಿಖರ ವರದಿಯನ್ನು ಯಾವುದೇ ತಪ್ಪಿಲ್ಲದೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ….

Read More

ಆಕಾಂಕ್ಷಿಗಳಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಎಂ.ಬಿ. ಪಾಟೀಲರನ್ನು ದೂಷಿಸುವುದು ಸರಿಯಲ್ಲ: ಡಾ. ಗಂಗಾಧರ ಸಂಬಣ್ಣಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 4:ನೂತನ ಸಚಿವ ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಆಕಾಂಕ್ಷಿಗಳಿಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ಸಚಿವ ಎಂ.ಬಿ. ಪಾಟೀಲರನ್ನು ಹೊಣೆಗಾರರನ್ನಾಗಿ ಮಾಡುವುದು ಸಂಪೂರ್ಣ ಅಸಮರ್ಥನೀಯ ಎಂದು ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ ತಿಳಿಸಿದ್ದಾರೆ.ಜಿಲ್ಲೆಯ ಕಾಂಗ್ರೆಸ್‌ನ ಆರೂ ಶಾಸಕರು ಸಚಿವ ಸ್ಥಾನಕ್ಕೆ ಅರ್ಹರಾಗಿದ್ದು, ಈ ಬಾರಿ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ದೊರೆಯುವ ನಿರೀಕ್ಷೆ ಇತ್ತು. ಈ ಸಂಬಂಧ ಎಂ.ಬಿ. ಪಾಟೀಲರೂ ಪ್ರಾಮಾಣಿಕ ಪ್ರಯತ್ನ ನಡೆಸಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ಮುಂದಿನ…

Read More

ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ:ಪರಿಹಾರ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವ ಎಂ.ಬಿ.ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 6: ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ, ಹಾನಿಗೊಳಗಾಗುವ ಗ್ರಾಮ, ಪ್ರದೇಶಗಳಿಗೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರೀಶಿಲನೆ ನಡೆಸಿ ಕೂಡಲೇ ನಿಯಮಾನುಸಾರ ಪರಿಹಾರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರೂ ಆದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಸೂಚನೆ ನೀಡಿದ್ದಾರೆ.ಜಿಲ್ಲೆಯಲ್ಲಿ ಕಳೆದ ರಾತ್ರಿ ವಾಡಿಕೆಗಿಂತ ಹೆಚ್ಚಾಗಿ ಅಂದರೆ 47ಎಂಎಂ ಮಳೆಯಾಗಿದ್ದು, ಅಲ್ಲದೇ, ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಂಭವವಿರುತ್ತದೆ. ಈ…

Read More

ಉದ್ಯೋಗ ಸೃಷ್ಟಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದು- ಸಚಿವ ಎಂ.ಬಿ.ಪಾಟೀಲ್

ಸಪ್ತಸಾಗರ ವಾರ್ತೆ, ವಿಜಯಪುರ, ಜು. 18: ಜಗತ್ತಿನಲ್ಲಿ ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದಿದೆ. ಈ ಕ್ಷೇತ್ರದ ಬೇಡಿಕೆಗಳಿಗೆ ಸ್ಪಂದಿಸಲು ಸಣ್ಣ ಕೈಗಾರಿಕೆ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ನಗರದ ಆಲಕುಂಟೆ ನಗರರದ ರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಉತ್ತರ ಕರ್ನಾಟಕ ಶಾಮಿಯಾನಾ ಸಪ್ಲಾಯರ್ಸ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ, ವಿಜಯಪುರ ಜಿಲ್ಲಾ ಮಂಟಪ,…

Read More