
ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ- ಸಚಿವ ಎಂ.ಬಿ.ಪಾಟೀಲ ಸೂಚನೆ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ ಹಾನಿ ಕುರಿತಂತೆ ಸಮಗ್ರ ಸಮೀಕ್ಷೆ ನಡೆಸಿ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಸೂಚನೆ ನೀಡಿದರು.ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಳೆಯಿಂದಾದ ಹಾನಿ ಹಾಗೂ ಅದರ ಪರಿಣಾಮಗಳ ಕುರಿತು ಮಾಹಿತಿ ಪಡೆದುಕೊಂಡ ಸಚಿವರು,…