ವಿಜಯಪುರದಲ್ಲಿ ಎಐ-ಎಂಎಲ್ ಹಾಗೂ ರೋಬೋಟಿಕ್ಸ್ ಪ್ರಯೋಗಾಲಯ ಉದ್ಘಾಟನೆ
ಸಪ್ತಸಾಗರ ವಾರ್ತೆ,ವಿಜಯಪುರ, ಜು.20:ನಗರದ ವಿ.ಬಿ. ದರಬಾರ ಶಾಲೆಯಲ್ಲಿ ಸೋಮವಾರ ಅತ್ಯಾಧುನಿಕ ಎಐ (AI), ಮೆಷಿನ್ ಲರ್ನಿಂಗ್ (ML) ಹಾಗೂ ರೋಬೋಟಿಕ್ಸ್ ಪ್ರಯೋಗಾಲಯವನ್ನು ಉದ್ಘಾಟಿಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಕೆ.ಜಿ. ದೇಶಪಾಂಡೆ, ಇಂದಿನ ತಂತ್ರಜ್ಞಾನ ಯುಗದಲ್ಲಿ ಕೃತಕ ಬುದ್ಧಿಮತ್ತೆ (AI) ಮಾನವನ ಸಾಮರ್ಥ್ಯವನ್ನು ವಿಸ್ತರಿಸುವ ಪ್ರಮುಖ ಸಾಧನವಾಗಿದೆ. ವಿದ್ಯಾರ್ಥಿಗಳು ಪ್ರಾಥಮಿಕ ಹಂತದಿಂದಲೇ ಎಐ, ಮೆಷಿನ್ ಲರ್ನಿಂಗ್ ಹಾಗೂ ರೋಬೋಟಿಕ್ಸ್ನಂತಹ ನವೀನ ತಂತ್ರಜ್ಞಾನಗಳ ಬಗ್ಗೆ ಅರಿವು ಮತ್ತು ಪ್ರಾಯೋಗಿಕ ಅನುಭವ ಹೊಂದಿದರೆ ಭವಿಷ್ಯದ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು…


