
ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆೆಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚನೆ
ಸಪ್ತಸಾಗರ ವಾರ್ತೆ,ವಿಜಯಪುರ ಸೆ.18:ಜಿಲ್ಲಾಡಳಿತದ ಮೂಲಕ ಅ.7 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳಿಗೆ ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಕುರಿತು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಅ.7ರ ಬೆಳಿಗ್ಗೆ 9-30 ಗಂಟೆಗೆ ನಗರದ ಶ್ರೀ…