ನಾಳೆಯಿಂದ ಸಾರವಾಡದಲ್ಲಿಈಶ್ವರ ಹಾಗೂ ಮಾರುತಿ ದೇವರ ಜಾತ್ರೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.13 :ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಶ್ರೀ ಈಶ್ವರ ಹಾಗೂ ಶ್ರೀ ಮಾರುತಿ ದೇವರ ಜಾತ್ರಾ ಮಹೋತ್ಸವವು ಇದೇ ದಿ.೧೪ ರಿಂದ ಐದು ದಿನಗಳವರೆಗೆ ವಿಜೃಂಭಣೆಯಿಂದ ಜರುಗಲಿದೆ.ಜಾತ್ರೆಯ ಅಂಗವಾಗಿ ವಿವಿಧ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ದಿ.14 ರಂದು ವಿವಿಧ ವಾದ್ಯ ಮೇಳ ಜಾಗೂ ಪಲ್ಲಕ್ಕಿ ಉತ್ಸವದೊಂದಿಗೆ ಕುಲಕರ್ಣಿ ಅವರ ಮನೆಯಿಂದ ಮಾರುತಿ ದೇವರ ಉತ್ಸವ ಮೂರ್ತಿಯನ್ನು ಮಾರುತಿ ದೇವಸ್ಥಾನಕ್ಕೆ ತಂದು ಬಳಿಕ ಓಕಳಿ ಕಂಬ ನಿಲ್ಲಿಸುವುದರೊಂದಿಗೆ ಜಾತ್ರೆಗೆ ವಿದ್ಯುಕ್ತವಾಗಿ ಚಾಲನೆ…

Read More