ಸರಣಿ ದೌರ್ಜನ್ಯ ಖಂಡಿಸಿ ಬೃಹತ್ ಹೋರಾಟದ ಎಚ್ಚರಿಕೆ
ಸಪ್ತಸಾಗರ ವಾರ್ತೆ ವಿಜಯಪುರ, ಆ.23:ರಾಜ್ಯಾದ್ಯಂತ ದಲಿತರು, ಹಿಂದುಳಿದವರು ಹಾಗೂ ಶೋಷಿತ ಸಮುದಾಯಗಳ ಮೇಲೆ ಹಲ್ಲೆ, ಕೊಲೆ, ಅತ್ಯಾಚಾರ ಹಾಗೂ ಸಾಮಾಜಿಕ ಬಹಿಷ್ಕಾರದಂತಹ ಘಟನೆಗಳು ಸರಣಿಯಾಗಿ ನಡೆಯುತ್ತಿದ್ದರೂ ಸರ್ಕಾರ ಮೌನ ವಹಿಸಿರುವುದು ಖಂಡನೀಯ ಎಂದು ಮುಖಂಡ ಗೌಡಪ್ಪ ಬಡಿಗೇರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬಾಗಲಕೋಟೆ ಜಿಲ್ಲೆಯ ಉಗಲವಾಟದಲ್ಲಿ ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ, ಕೊಪ್ಪಳ ಹಾಗೂ ಚಿಕ್ಕಬಳ್ಳಾಪುರದಲ್ಲಿ ಕಳವು ಶಂಕೆಯಿಂದ ಬಾಲಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆಗಳು ನಡೆದಿವೆ. ರಾಯಚೂರಿನಲ್ಲಿ ಬಿಎಸ್‌ಪಿ ಮುಖಂಡ ಭೂಮಾನಂದ ಅವರ ಹತ್ಯೆ ಹಾಗೂ…


