ಪಾಲಿಕೆ ನೂತನ ಮೇಯರ್ ಉಪಮೇಯರ್ ಬಿಜೆಪಿ ಕಚೇರಿ ಭೇಟಿ

ಸಪ್ತಸಾಗರ ವಾರ್ತೆ ವಿಜಯಪುರ, ಆ. 11: ಮಹಾನಗರ. ಪಾಲಿಕೆಯಲ್ಲಿ ಕಮಲ‌ ಅರಳಿದ್ದು, ನೂತನ ಮೇಯರ್ ಆಗಿ ಆಯ್ಕೆಯಾದ ಎಂ.ಎಸ್. ಕರಡಿ ಹಾಗೂ ಉಪಮೇಯರ್ ಆಗಿ ಆಯ್ಕೆಯಾದ ಸುಮಿತ್ರಾ ಜಾಧವ ಅವರು ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿದರು.ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿದರು. ಈ ವೇಳೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಪಾಲಿಕೆಯ ಬಿಜೆಪಿ ಸದಸ್ಯರು ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು.ಸನ್ಮಾನ ಸ್ವೀಕರಿಸಿದ ನೂತನ ಮೇಯರ್ ಎಂ.ಎಸ್. ಕರಡಿ ಮಾತನಾಡಿ, ಬಿಜೆಪಿ ದೇಶಾಭಿಮಾನ ಉಸಿರಾಗಿಸಿಕೊಂಡ ಪಕ್ಷ, ಈ ಪಕ್ಷದ ಸದಸ್ಯನಾಗಿರುವುದೇ…

Read More

ಮಹಾಪೌರರಾಗಿ ಎಂ.ಎಸ್. ಕರಡಿ, ಉಪ ಮಹಾಪೌರರಾಗಿ ಸುಮಿತ್ರಾ ಜಾಧವ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 11: ವಿಜಯಪುರ ಮಹಾನಗರ ಪಾಲಿಕೆ ಮಹಾಪೌರರಾಗಿ ಎಂ.ಎಸ್.ಕರಡಿ ಹಾಗೂ ಉಪ ಮಹಾಪೌರರಾಗಿ ಸುಮಿತ್ರಾಜಾಧವ ಆಯ್ಕೆಯಾಗಿದ್ದಾರೆ.ಬೆಳಗಾವಿ ಪ್ರಾದೇಶಿಕ ಆಯುಕ್ತ ಸಂಜಯ್ ಶೆಟ್ಟೆನವರ ವಿಜಯಪುರ ಮಹಾನಗರ ಪಾಲಿಕೆಯ 22ನೇ ಮಹಾಪೌರ ಹಾಗೂ ಉಪ ಮಹಾಪೌರರ ಆಯ್ಕೆಯ ಚುನಾವಣೆ ಫಲಿತಾಂಶವನ್ನು ಸೋಮವಾರ ಅಧಿಕೃತವಾಗಿ ಘೋಷಿಸಿದರು.ಜನೆವರಿ, ಫೆಬ್ರವರಿ ತಿಂಗಳಲ್ಲಿ ನಡೆದ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ ಚುನಾವಣೆ ಫಲಿತಾಂಶವನ್ನು ಘೋಷಣೆ ಮಾಡಲು ಈ ಮುಂಚೆ ಆ.7ರಂದು ಸಭೆ ನಿಗದಿಪಡಿಸಲಾಗಿತ್ತು. ನಂತರ ಈ ದಿನಾಂಕವನ್ನು ಆ. 11ಕ್ಕೆ…

Read More

ಆ.7ರಂದು ಮಹಾನಗರ ಪಾಲಿಕೆ ಮಹಾಪೌರ-ಉಪಮಹಾಪೌರ ಫಲಿತಾಂಶ ಘೋಷಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 31:ವಿಜಯಪುರ ಮಹಾನಗರ ಪಾಲಿಕೆಯ 22ನೇ ಅವಧಿಗೆ 2025-ಜನವರಿ, ಫೆಬ್ರವರಿ ತಿಂಗಳಲ್ಲಿ ಜರುಗಿದ ಮಹಾಪೌರ ಹಾಗೂ ಉಪ ಮಹಾಪೌರ ಆಯ್ಕೆಯ ಚುನಾವಣೆ ಫಲಿತಾಂಶವನ್ನು ಘೋಷಣೆ ಮಾಡಲು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಆ.7ರಂದು ಮಧ್ಯಾಹ್ನ 1 ಗಂಟೆಗೆ ಸಭೆ ಆಯೋಜಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಅಧ್ಯಕ್ಷಾಧಿಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ ಅವರು ತಿಳಿಸಿದ್ದಾರೆ.

Read More