
ನನಗೂ ಪಿಪಿಪಿ ಮಾದರಿ ಸರ್ಕಾರಿ ಮೆಡಿಕಲ್ ಕಾಲೇಜ್ ಬೇಡ: ಸಚಿವ ಎಂ.ಬಿ. ಪಾಟೀಲ
ಸಪ್ತಸಾಗರ ವಾರ್ತೆ ವಿಜಯಪುರ, ಆ. 31:ವಿಜಯಪುರ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಬೇಕು ಎನ್ನುವ ಇರಾದೆ ನನ್ನದೂ ಇದೆ. ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಬರುವುದನ್ನು ನಾನು ವಿರೋಧಿಸುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟಪಡಿಸಿದರು.ಭಾನುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ವಿಜಯಪುರ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಬರುವುದಕ್ಕೆ ನಾನು ವಿರೋಧಿಯಾಗಿದ್ದೇನೆ ಎಂಬ ಅರ್ಥ ಬರುವಂತೆ ಕೆಲವರು ಬಿಂಬಿಸುತ್ತಿದ್ದಾರೆ. ಆದರೆ ಇದರಲ್ಲಿ ನನ್ನ ಯಾವುದೇ ಪಾತ್ರ ಇಲ್ಲ. ನಾನು ಕೂಡಾ ವಿಜಯಪುರ ಜಿಲ್ಲೆಗೆ…