
ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಸೌಲಭ್ಯ: ಆಶಾ ಪಾಟೀಲ
ಸಪ್ತಸಾಗರ ವಾರ್ತೆ, ವಿಜಯಪುರ, ಜು. 24: ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಸರಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಸೌಲಭ್ಯ ಒದಗಿಸುವ ಮೂಲಕ ಡಿಜಿಟಲ್ ಟಚ್ ನೀಡಲಾಗುತ್ತಿದೆ ಎಂದು ಆಶಾ ಎಂ. ಪಾಟೀಲ ಹೇಳಿದ್ದಾರೆ.ಗುರುವಾರ ತಿಕೋಟಾ ತಾಲೂಕಿನ ಅರಕೇರಿಯ ಸರಕಾರಿ ಪ್ರೌಢಶಾಲೆಯಲ್ಲಿ ಎಕಸ್ ಸಂಸ್ಥೆಯಿಂದ ಸಿ.ಎಸ್.ಆರ್ ಅನುದಾನದಡಿ ಮಂಜೂರಾಗಿರುವ ಸ್ಮಾರ್ಟ್ ಬೋರ್ಡ್ ಉದ್ಘಾಟನೆ ಮತ್ತು ಧಾಸ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಸಿ.ಎಸ್.ಆರ್ ಅನುದಾನದಡಿ ಅರಕೇರಿ ಎಲ್.ಟಿ-3ರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರೀಡಾ ಸಲಕರಣೆ…