
ಮಾನವನ ಬಾಳು ಉಜ್ವಲಗೊಳ್ಳಲು ಅಧ್ಯಾತ್ಮ ಬೇಕು-ಚನ್ನಮಲ್ಲಿಕಾರ್ಜುನ ಶ್ರೀಗಳು
ಸಪ್ತಸಾಗರ ವಾರ್ತೆ ವಿಜಯಪುರ, ಆ. 2: ಜಗ ಬೆಳಗಲು ಸೂರ್ಯ, ಬದುಕು ಬೆಳಗಲು ಗುರು ಬೇಕು. ಭೌತಿಕ ಬದುಕನ್ನು ಬೆಳಗಲು ಅಧ್ಯಾತ್ಮ ಬೇಕು. ಅಂದಾಗ ಮಾನವನ ಬಾಳು ಉಜ್ವಲಗೊಳ್ಳಲಿದೆ ಎಂದು ಮ ಘ ಚ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಶ್ರಾವಣ ಮಾಸದ ನಿಮಿತ್ತ ಶುಕ್ರವಾರ ಸಂಜೆ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಹಿರೇಮಠದಲ್ಲಿ ನಡೆಯುತ್ತಿರುವ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಪುರಾಣದಲ್ಲಿ ತೊಟ್ಟಿಲು ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದರು.‘ನೈತಿಕ ಮೌಲ್ಯಗಳು ಕುಸಿಯುತ್ತಿರುವ ಇಂದಿನ ದಿನಗಳಲ್ಲಿ ಜನತೆಗೆ ಮಾನಸಿಕ ನೆಮ್ಮದಿ ಇಲ್ಲದಂತಾಗಿದೆ….